ಗುಬ್ಬಿ : ತಾಲ್ಲೂಕಿನ ಕಲ್ಲೂರು ಗ್ರಾಮದಲ್ಲಿ ಚಾಲುಕ್ಯ ಆಸ್ಪತ್ರೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಹಾಗೂ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಉಚಿತ ಆರೋಗ್ಯ ಶಿಬಿರ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು ಇದೇ ಸಂದರ್ಭದಲ್ಲಿ ಮಾತನಾಡಿದ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಮಿತ್ರ ಆರೋಗ್ಯ ಶಿಬಿರದಲ್ಲಿ ಸುಮಾರು 200ಕ್ಕೂ ಹೆಚ್ಚು ಹೊರರೋಗಿಗಳ ಆಗಮಿಸಿ ಚಿಕಿತ್ಸೆ ಪಡೆದು ಕೊಂಡಿದ್ದಾರೆ, ಗ್ರಾಮಾಂತರ ಭಾಗದಲ್ಲಿ ಇಂತಹ ಉಚಿತ ಆರೋಗ್ಯ ಶಿಬಿರಗಳನ್ನು ಮಾಡಿದಾಗ ಆರ್ಥಿಕವಾಗಿ ಹಿಂದುಳಿದಿರುವ ಹಾಗೂ ವೃದ್ಧರಿಗೆ ಹೆಚ್ಚು ಅನುಕೂಲವಾಗುತ್ತದೆ ಇಂತಹ ಕಾರ್ಯಕ್ರಮಗಳನ್ನು ಚಾಲುಕ್ಯ ಆಸ್ಪತ್ರೆ ಹೆಚ್ಚೆಚ್ಚು ಮಾಡಲಿ ಎಂದು ಮನವಿ ಮಾಡಿದರು.
ಚಾಲುಕ್ಯ ಆಸ್ಪತ್ರೆಯ ವ್ಯವಸ್ಥಾಪಕ ಹರೀಶ್ ಮಾತನಾಡಿ ನಾವು ಪ್ರತಿ ತಿಂಗಳು ಸಹ ಹೋಬಳಿ, ಹಾಗೂ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಉಚಿತ ಆರೋಗ್ಯ ಶಿಬಿರ,ನೇತ್ರ ಶಿಬಿರ, ಹೃದಯಕ್ಕೆ ಸಂಬಂಧಪಟ್ಟಂತಹ ಸಮಸ್ಯೆಗಳಿಗೆ ಉಚಿತವಾಗಿ ಚಿಕಿತ್ಸೆ ನೀಡುತ್ತಿದ್ದೇವೆ ಮತ್ತು ಅತ್ಯಂತ ಕಡು ಬಡವರಿಗೆ ನಮ್ಮ ಆಸ್ಪತ್ರೆಯಲ್ಲಿ ಉಚಿತವಾಗಿ ಎಲ್ಲಾ ರೀತಿಯ ಚಿಕಿತ್ಸೆ ಊಟದ ವ್ಯವಸ್ಥೆಯನ್ನು ಸಹ ಮಾಡಿ ಅವರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಸಾಮಾಜಿಕ ಕೆಲಸ ಕಾರ್ಯಗಳಿಗೂ ಕೂಡ ಕೈಜೋಡಿಸಿದ್ದು ಇಂತಹ ಕಾರ್ಯಕ್ರಮಗಳಿಗೆ ಹೆಚ್ಚಿನ ಪ್ರೋತ್ಸಾಹವನ್ನು ತಾವೆಲ್ಲರೂ ನೀಡಬೇಕು ಈ ಅರೋಗ್ಯ ಶಿಬಿರಗಳನ್ನು ನಿರಂತರವಾಗಿ ಮಾಡುತ್ತೇವೆ ನೇತ್ರ ಚಿಕಿತ್ಸೆಗೆ ಸಂಬಂಧಪಟ್ಟಂತೆ ಈಗಾಗಲೇ ಸಾಕಷ್ಟು ಜನರಿಗೆ ಉಚಿತವಾಗಿ ಶಸ್ತ್ರಚಿಕಿತ್ಸೆಯನ್ನು ಸಹ ಮಾಡಲಾಗಿದೆ ಎಂದು ತಿಳಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ತಾಲೂಕು ಯೋಜನಾಧಿಕಾರಿ ರಾಜೇಶ್ ಮಾತನಾಡಿ ನಮ್ಮ ಸಂಸ್ಥೆಯು ಸಾಮಾಜಿಕವಾಗಿ ನಿರಂತರವಾಗಿ ಕೆಲಸ ಮಾಡುತ್ತಿದೆ ಇಂದು ಚಾಲುಕ್ಯ ಆಸ್ಪತ್ರೆ ಹಾಗೂ ತಾಲೂಕು ಪತ್ರ ಕರ್ತರ ಸಂಘದ ಸಹಯೋಗದಲ್ಲಿ ಆರೋಗ್ಯ ಶಿಬಿರ ಕಾರ್ಯಕ್ರಮ ಮಾಡಿದ್ದು ಇದರಿಂದ ಹಳ್ಳಿಯ ಜನರಿಗೆ ಸಾಕಷ್ಟು ಅನುಕೂಲವಾಗುತ್ತದೆ ಇಂತಹ ಕಾರ್ಯಕ್ರಮಗಳ ಆಯೋಜನೆ ಮಾಡಿದಾಗ ಗ್ರಾಮಸ್ಥರು, ಸಾರ್ವಜನಿಕರು ಹೆಚ್ಚಿನ ರೀತಿಯಲ್ಲಿ ಸಹಕರಿಸಿ ಎಂದು ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರುಗಳುಚಾಲುಕ್ಯ ಆಸ್ಪತ್ರೆಯ ಡಾ. ಕನಕದುರ್ಗ, ಜಾನ್ಸಿ, ನವೀನ್, ಮನೋಜ್, ಮೋನಿಷಾ, ಫಾರ್ಮಸಿ ಶಿವು ಸೇರಿದಂತೆ ಚಾಲುಕ್ಯ ಆಸ್ಪತ್ರೆ ಸಿಬ್ಬಂದಿಗಳು ಹಾಜರಿದ್ದರು.
