ಗುಬ್ಬಿ : ಜ. 21 ಕ್ಕೆ ಮತ್ತಿಕೆರೆ ಗ್ರಾಮದಲ್ಲಿ ಡಿಸಿ ನಡೆ ಹಳ್ಳಿ ಕಡೆ ಕಾರ್ಯಕ್ರಮ.
ತಾಲ್ಲೂಕಿನ ಹಾಗಲವಾಡಿ ಹೋಬಳಿಯ ಮತ್ತಿಕೆರೆ ಗ್ರಾಮದ ರಂಗನಾಥ ಸ್ವಾಮಿ ದೇವಾಲಯ ಆವರಣದಲ್ಲಿ ಜ. 21ರಂದು ಜಿಲ್ಲಾಧಿಕಾರಿ ನಡೆಯ ಕಡೆ ಹಳ್ಳಿಯ ಕಡೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಗ್ರಾಮ ವಾಸ್ತವ್ಯಕ್ಕೆ ರೈತರು ಹಾಗೂ ಸಾರ್ವಜನಿಕರು ಆಗಮಿಸಿ ತಮ್ಮ ಅಹವಾಲುಗಳನ್ನು ನೀಡುವಂತೆ ಮನವಿ ಮಾಡಲಾಗಿದೆ. ಕಾರ್ಯಕ್ರಮದಲ್ಲಿ ಎಲ್ಲಾ ಇಲಾಖೆಯ ಅಧಿಕಾರಿಗಳು ಭಾಗವಹಿಸಲಿದ್ದು, ಕಂದಾಯ ಇಲಾಖೆ ಹಾಗೂ ಸಂಬಂಧ ಪಟ್ಟ ತಾಲ್ಲೂಕು ಮಟ್ಟದ ಎಲ್ಲಾ ಇಲಾಖೆಗಳ ಕೌಂಟರ್ ಗಳನ್ನು ತೆರೆದು ಸಾರ್ವಜನಿಕರ ಅರ್ಜಿಗಳನ್ನು ಸ್ವೀಕರಿಸಲಾಗುವುದು ಎಂದು ತಹಶೀಲ್ದಾರ್ ಬಿ. ಆರತಿ ತಿಳಿಸಿದ್ದಾರೆ.
ವರದಿ : ಮಡೇನಹಳ್ಳಿ ಮಂಜುನಾಥ್
