ಜ.21 ರಂದು ವಿಜಯ ಸಂಕಲ್ಪ ಯಾತ್ರೆ ಅಭಿಯಾನಕ್ಕೆ ಮಾಜಿ ಸಿಎಂ ಡಿ.ವಿ.ಸದಾನಂದಗೌಡ ಚಾಲನೆ ನೀಡಲಿದ್ದಾರೆ.

 ಮಧುಗಿರಿ : ಪಟ್ಟಣದಲ್ಲಿ ಜ.21 ರಂದು ವಿಜಯ ಸಂಕಲ್ಪ ಯಾತ್ರೆ ಅಭಿಯಾನಕ್ಕೆ ಮಾಜಿ ಸಿಎಂ ಡಿ.ವಿ.ಸದಾನಂದಗೌಡ ಚಾಲನೆ ನೀಡಲಿದ್ದಾರೆ ಎಂದು ಮಧುಗಿರಿ ಸಂಘಟನಾತ್ಮಕ ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿ.ಕೆ.ಮಂಜುನಾಥ್ ತಿಳಿಸಿದರು.



ಪಟ್ಟಣದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಜ.21 ರಿಂದ 29 ರ ವರೆಗೆ ರಾಜ್ಯದಲ್ಲಿ ವಿಜಯಸಂಕಲ್ಪ ಯಾತ್ರ ಅಭಿಯಾನ ಹಮ್ಮಿಕೊಂಡಿದ್ದು, ಕೊರಟಗೆರೆಯಲ್ಲಿ ಸಂಸದ ಜಿ ಎಸ್ ಬಸವರಾಜು, ಶಿರಾದಲ್ಲಿ ಶಾಸಕರ ಡಾ.ಸಿ.ಎಂ.ರಾಜೇಶ್ ಗೌಡ, ಪಾವಗಡದಲ್ಲಿ ವಿಧಾನಷರಿಷತ್ ಸದಸ್ಯ ಚಿದಾನಂದ್ ಎಂ ಗೌಡ ರವರು ಈ ಅಭಿಮಾನ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದರು.


ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ರವರು ನೀಡಿರುವ ಅಭಿವೃದ್ಧಿ ಕಾರ್ಯಕ್ರಮಗಳನ್ನು ನಮ್ಮ ಪಕ್ಷದ ಕಾರ್ಯಕರ್ತರು ಕರಪತ್ರಗಳ ಮೂಲಕ ಮನೆ ಮನೆಗೂ ತಿಳಿಸಲಿದ್ದಾರೆ ಸರ್ಕಾರದ ಸವಲತ್ತುಗಳನ್ನು ಪಡೆದಿರುವ ಫಲಾನುಭವಿಗಳನ್ನು ಭೇಟಿ ಮಾಡಿ ನಮ್ಮ ಪಕ್ಷಕ್ಕೆ ಮತ ನೀಡುವಂತೆ ಮನವಿ ಮಾಡುಲಾಗುವುದು. ಈ ಭಾರಿ ಬಿಜೆಪಿಗೆ ಮತ ನೀಡುವಂತೆ ಗೋಡೆ ಬತಹಗಳನ್ನು ಬರೆಯಲಾಗುವುದು ಹಾಗೂ ಕಾರ್ಯಕರ್ತರ ಮನೆ ವಾಹನಗಳ ಮೇಲೆ ಬಿಜೆಪಿಗೆ ಮತ ನೀಡಿ ಗೆಲ್ಲಿಸುವಂತೆ ಸ್ಟಿಕ್ಕರ್‍ಗಳನ್ನು ಅಂಟಿಸುವುದು ಈ ಅಭಿಯಾನದ ಮುಖ್ಯ ಉದ್ದೇಶವಾಗಿದೆ ಎಂದರು.


ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ನಮ್ಮ ಪಕ್ಷ 140 ರಿಂದ 150 ಕ್ಷೇತ್ರಗಳಲ್ಲಿ ಗೆಲ್ಲುವ ಗುರಿ ಹೊಂದಲಾಗಿದ್ದು, ಈ ಉಪವಿಭಾಗದ 4 ಕ್ಷೇತ್ರಗಳಲ್ಲೂ ಪಕ್ಷವನ್ನು ಗೆಲ್ಲಿಸುವ ಕಾರ್ಯತಂತ್ರ ರೂಪಿಸಲಾಗುವುದು ಎಂದರು.


ಕೋರ್ ಕಮಿಟಿ ಅಧ್ಯಕ್ಷ ಮಾಜಿ ಶಾಸಕ ಗಂಗಹನುಮಯ್ಯ, ಅಭಿಮಾನದ ಜಿಲ್ಲಾ ಸಂಚಾಲಕ ಮಾರುತಿ ಗಂಗಹನುಮಯ್ಯ, ಪ್ರಧಾನ ಕಾರ್ಯದರ್ಶಿಗಳಾದ ಪಾವಗಡ ರವಿ, ಜಯಣ್ಣ, ಕಾರ್ಯಾಲಯ ಕಾರ್ಯದರ್ಶಿ ಎಂ.ಸುರೇಶ್, ಮಂಡಲ ಬಿಜೆಪಿ ಅಧ್ಯಕ್ಷ ಪಿ.ಎಲ್.ನರಸಿಂಹಮೂರ್ತಿ, ಜಿಲ್ಲಾ ಕಾರ್ಯದರ್ಶಿ ಕಂಬದರಂಗಪ್ಪ, ಯುವ ಮೋರ್ಚಾ ಅಧ್ಯಕ್ಷ ಕಾರ್ತಿಕ್ ಆರಾಧ್ಯ, ಎಸ್.ಸಿ.ಮೋರ್ಚಾ ಅಧ್ಯಕ್ಷ ರವಿ, ಪದಾಧಿಕಾರಿಗಳಾದ ನಾಗೇಂದ್ರ, ಮಂಜುನಾಥ್, ಅಪ್ಪಾಜಪ್ಪ, ರಮೇಶ್ ಇತರರು ಇದ್ದರು.


ವರದಿ : ಮದುಗಿರಿ ಬಾಲು ಪಣಿಂದ್ರ.

ಕಾಮೆಂಟ್‌‌ ಪೋಸ್ಟ್‌ ಮಾಡಿ

Please Select Embedded Mode To Show The Comment System.*

ನವೀನ ಹಳೆಯದು