ಬಿಳಿಗೆರೆ ಸರ್ಕಾರಿ ಶಾಲೆಯಲ್ಲಿ ಸಡಗರದ 74ನೇ ಗಣರಾಜ್ಯೋತ್ಸವ ಆಚರಣೆ.

 ಗುಬ್ಬಿ ಸುದ್ದಿ : ಬಿಳಿಗೆರೆ ಸರ್ಕಾರಿ ಶಾಲೆಯಲ್ಲಿ ಸಡಗರದ 74ನೇ ಗಣರಾಜ್ಯೋತ್ಸವ ಆಚರಣೆ.


ಗುಬ್ಬಿ ತಾಲ್ಲೂಕಿನ ಕಸಬಾ ಹೋಬಳಿಯ ಬಿಳಿಗೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸಿ ಧ್ವಜಾರೋಹಣ ಮಾಡುವ ಮೂಲಕ 74ನೇ ಗಣರಾಜ್ಯೋತ್ಸವ ವನ್ನು ಆಚರಿಸಲಾಯಿತು.


 ಇದೆ ಸಂದರ್ಭದಲ್ಲಿ ಅಂಬೇಡ್ಕರ್ ಸೇನೆಯ ಕಸಬಾ ಹೋಬಳಿ ಅಧ್ಯಕ್ಷ ಶಿವಲಿಂಗಯ್ಯ ಮಾತನಾಡಿ ಸ್ವಾತಂತ್ರ್ಯ ಬಂದ ನಂತರ ಎಲ್ಲಾ ರಾಜ್ಯಗಳನ್ನು ಒಗ್ಗೂಡಿಸಿದರು ಆದ್ದರಿಂದ ಜನವರಿ 26 ರಂದು ದೇಶಾದ್ಯಂತ ಗಣರಾಜ್ಯೋತ್ಸವ ದಿನವೆಂದು ತುಂಬಾ ಸಡಗರದಿಂದ ಆಚರಿಸುತ್ತಾರೆ ಎಂದು ಅವರು, ಮಕ್ಕಳು ಕ್ರೀಡೆ ಹಾಗೂ ಅಭ್ಯಾಸದ ಕಡೆ ಗಮನ ವಹಿಸಿ, ಗುರು ಹಿರಿಯರನ್ನು ಗೌರವಿಸಿ ಎಂದರು, ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬಂತೆ ಮಕ್ಕಳು ಸಣ್ಣ ವಯಸ್ಸಿನಿಂದಲೇ ಉತ್ತಮ ಅಭ್ಯಾಸ ಮಾಡಿದರೆ ಸಮಾಜದಲ್ಲಿ ಒಬ್ಬ ಒಳ್ಳೆಯ ಪ್ರಜೆಯಾಗಬಹುದು ಎಂದು ತಿಳಿಸಿದರು.


 ಈ ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕಿ ಭಾಗ್ಯಮ್ಮ, ಎಸ್. ಡಿ. ಎಂ. ಸಿ ಸದಸ್ಯ ಮಹೇಶ್.ಆರ್, ಗ್ರಾಮ ಪಂಚಾಯಿತಿ ಸದಸ್ಯ ನಾರಾಯಣಸ್ವಾಮಿ ಬಿ.ಆರ್, ಮಂಜುನಾಥ್ ಹಾಗೂ ಹಳೆ ವಿದ್ಯಾರ್ಥಿ ಸಂಘದವರು, ಮತ್ತು ಶಿಕ್ಷಕ ವೃಂದದವರು ಹಾಗೂ ಗ್ರಾಮಸ್ಥರು ಹಾಜರಿದ್ದರು.


ವರದಿ : ಮಡೇನಹಳ್ಳಿ ಮಂಜು.

ಕಾಮೆಂಟ್‌‌ ಪೋಸ್ಟ್‌ ಮಾಡಿ

Please Select Embedded Mode To Show The Comment System.*

ನವೀನ ಹಳೆಯದು