ನಾ ನಾಯಕಿ ಸಮಾವೇಶಕ್ಕೆ ಮಹಿಳಾ ಕಾರ್ಯಕರ್ತೆಯರ ದಂಡು.

 ಚಿಕ್ಕನಾಯಕನಹಳ್ಳಿ : ಬೆಂಗಳೂರಿನ ಅರಮನೆ ಮೈದಾನದಲ್ಲಿ ಜ. 16 ಸೋಮವಾರದಂದು ರಾಷ್ಟ್ರ ನಾಯಕಿ ಪ್ರಿಯಾಂಕ ಗಾಂಧಿಯವರು ಆಗಮಿಸಲಿರುವ *ನಾ ನಾಯಕಿ* ಸಮಾವೇಶಕ್ಕೆ ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದ 262 ಭೂತ್ ಗಳಿಂದ ತಲಾ 3 ಜನ ಮಹಿಳಾ ಕಾರ್ಯಕರ್ತರಂತೆ 1 ಸಾವಿರಕ್ಕೂ ಅಧಿಕ ಮಹಿಳಾ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ರಾಧಾ ವಿಜಯ ರಾಘವೇಂದ್ರ ತಿಳಿಸಿದರು.



ಸಮಾವೇಶದಲ್ಲಿ ರಾಜ್ಯದ ಮೂಲೆ ಮೂಲೆಗಳಿಂದ ಸುಮಾರು 10 ಲಕ್ಷ ಜನ ಭಾಗವಹಿಸುವ ನಿರೀಕ್ಷೆ ಇದೆ.


ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದು ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.


ಮಹಿಳೆಯರನ್ನು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಅಗತ್ಯವಾಗಿ ಬೇಕಿರುವ ದೃಷ್ಟಿಯಲ್ಲಿಟ್ಟುಕೊಂಡು ಕಾಂಗ್ರೆಸ್ ಬಿಡುಗಡೆ ಮಾಡಲಿರುವ ಪ್ರಣಾಳಿಕೆಗೆ ಕೆಲ ಅಂಶಗಳನ್ನು ಸೇರಿಸಲು ಸಲಹೆ ನೀಡಲಾಗುವುದು.


1)..ನ್ಯಾಯಬೆಲೆ ಅಂಗಡಿಗಳಲ್ಲಿ ಸ್ಯಾನಿಟರಿ ಪ್ಯಾಡ್ ವಿತರಣೆ, 2)..ಗರ್ಭಕೋಶ ಕ್ಯಾನ್ಸರ್ ತಡೆಗೆ ಎಚ್ಪಿವಿ ಲಸಿಕೆ ವಿತರಣೆ, 3)..ಮಹಿಳೆಯರಿಗೆ ಶೇ. ೫೦ ರಷ್ಟು ಮೀಸಲು ಹೆಚ್ಚಿಸಬೇಕೆಂಬ ವಿಷಯಗಳನ್ನು ಪ್ರಣಾಳಿಕೆಯಲ್ಲಿ ಸೇರಿಸಲು ಸಭೆಯಲ್ಲಿ ಪ್ರಿಯಾಂಕ ಗಾಂಧಿ ಅವರ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು.



ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸಿ.ಡಿ. ಚಂದ್ರಶೇಖರ್ ಮಾತನಾಡಿ,ಮುಂಬರುವ ಚುನಾವಣೆಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಜಾರಿಗೆ ತರುವ ಯೋಜನೆಗಳ ಬಗ್ಗೆ ನಾ ನಾಯಕಿ ಸಮಾವೇಶದಲ್ಲಿ ಮಂಡನೆಯಾಗಲಿದೆ ಎಂದರು. 

ಕಾಂಗ್ರೆಸ್ ಪಕ್ಷ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲು ಪ್ರಮಾಣವನ್ನು ಹೆಚ್ಚಿಸಿದ್ದರಿಂದ ಪ್ರತಿನಿಧಿಗಳ ಸಂಖ್ಯೆ ಹೆಚ್ಚಾಗಿ 5 ಲಕ್ಷ ಮಹಿಳೆಯರೇ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ಇದು ಲೋಕಸಭೆ, ರಾಜ್ಯಸಭೆ, ವಿಧಾನಸಭೆಗಳಲ್ಲೂ ಆಗಬೇಕೆನ್ನುವುದು ಪಕ್ಷದ ದೋರಣೆಯಾಗಿದೆ. ಈ ನಿಟ್ಟಿನಲ್ಲಿ ಹೋರಾಟ ನಡೆಸಲಿದೆ ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ. ಬಸವರಾಜು ಮಾತನಾಡಿ, ಮಾಜಿ ಪ್ರಧಾನಿ ಇಂದಿರಾಗಾಂಧಿ ಉಕ್ಕಿನ ಮಹಿಳೆ ಎಂದೇ ಹೆಸರಾಗಿದ್ದರು. ಅವರ ಮೊಮ್ಮಗಳು ಪ್ರಿಯಾಂಕ ಗಾಂಧಿ ಅವರಲ್ಲಿ ಇಂದಿರಾಗಾಂಧಿ ಅವರಂತಹ ದಿಟ್ಟ ಗುಣಗಳಿವೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಅವರು ರಾಜ್ಯದಲ್ಲಿದ್ದರೆ ಪಕ್ಷಕ್ಕೆ ಲಾಭವಾಗಲಿದೆ. ಈ ಕುರಿತು ಅವರನ್ನು ಕೇಳಿಕೊಳ್ಳಲಾಗಿದೆ ಎಂದರು.


ಈ ವೇಳೆ ಸಿ ಎನ್ ಹಳ್ಳಿ ವಿಧಾನಸಭೆ ಆಕಾಂಕ್ಷಿ ಡಾ. ವಿಜಯ ರಾಘವೇಂದ್ರ, ರಾಜ್ಯ ಸೇವಾ ಘಟಕದ ಜಂಟಿ ಕಾರ್ಯದರ್ಶಿ ಕೆ. ಜೆ.ಕೃಷ್ಣೇಗೌಡ, ಬ್ಲಾಕ್ ಕಾಂಗ್ರೆಸ್ ಎಸ್ಸಿ ಘಟಕದ ಅಧ್ಯಕ್ಷ ಅಗಸರಹಳ್ಳಿ ನರಸಿಂಹಮೂರ್ತಿ, ಸುರೇಶ್ನಾಯ್ಕ್, ಜಾಕೀರ್, ಮೂಜಿಬ್, ಸುರೇಶ್ ಇತರರು ಗೋಷ್ಠಿಯಲ್ಲಿದ್ದರು.



 ವರದಿ : ಚಿಕ್ಕನಾಯಕನಹಳ್ಳಿ ಚಂದ್ರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

Please Select Embedded Mode To Show The Comment System.*

ನವೀನ ಹಳೆಯದು