ಗುಬ್ಬಿ ಸುದ್ದಿ : ಕಾಂಗ್ರೆಸ್ ನ ಪ್ರಚಾರ ಸಮಿತಿ ಅಧ್ಯಕ್ಷ ಸಲೀಂ ಪಾಷ ಪಕ್ಷ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ.
ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ಜೆಡಿಎಸ್ ಅಭ್ಯರ್ಥಿ ಬಿ.ಎಸ್.ನಾಗರಾಜು ಅವರ ಸಮ್ಮುಖದಲ್ಲಿ ಕಾಂಗ್ರೆಸ್ ನ ಪ್ರಚಾರ ಸಮಿತಿ ಅಧ್ಯಕ್ಷರಾಗಿದ್ದ ಸಲೀಂ ಪಾಷ ರವರು ಜೆಡಿಎಸ್ ಪಕ್ಷಕ್ಕೆ ಅಧಿಕೃತ ಸೇರ್ಪಡೆಗೊಂಡು ನಂತರ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷದಲ್ಲಿ ಮುಸ್ಲಿಂ ನಾಯಕರನ್ನು ಡಿಸಿಎಂ ಮಾಡುತ್ತೇವೆ ಎಂದು ಯಾರೂ ಒಂದು ಹೇಳಿಕೆ ನೀಡಿಲ್ಲ. ಸದ್ಯದ ಸ್ಥಿತಿಯಲ್ಲಿ ಕಾಂಗ್ರೆಸ್ ಪಕ್ಷದ ಯಾವ ಮುಸ್ಲಿಂ ಶಾಸಕರು ಪ್ರಚಲಿತಕ್ಕೆ ಬಂದಿಲ್ಲ ನಮ್ಮ ಮುಸ್ಲಿಂ ಸಮುದಾಯಕ್ಕೆ ಕಾಂಗ್ರೆಸ್ ಪಕ್ಷದಿಂದ ಅನ್ಯಾಯವಾಗುತ್ತಿದೆ ಎಂದ ಅವರು ರಾಷ್ಟ್ರೀಯ ಪಕ್ಷಗಳ ಆಡಳಿತಕ್ಕೆ ಬೇಸತ್ತ ಜನತೆ ಈಗಾಗಲೇ ಸಾಕಷ್ಟು ರಾಜ್ಯದಲ್ಲಿ ಪ್ರಾದೇಶಿಕ ಪಕ್ಷಕ್ಕೆ ಒಲವು ತೋರಿದ್ದಾರೆ. ನಮ್ಮ ರಾಜ್ಯದಲ್ಲೂ ಸಹ ಜೆಡಿಎಸ್ ಅಧಿಕಾರಕ್ಕೆ ಬರಲಿದೆ. ಮುಸಲ್ಮಾನರ ರಕ್ಷಣೆ ಮಾಡುವ ಏಕೈಕ ಪಕ್ಷ ಜೆಡಿಎಸ್ ಆಗಿದೆ ಎಂದ ಅವರು ಜೆಡಿಎಸ್ ಪಕ್ಷ ಸಿದ್ದಾಂತ ಒಪ್ಪಿ ಹಾಗೂ ಪಂಚರತ್ನ ಯೋಜನೆಯು ಜನಸಾಮಾನ್ಯರಿಗೆ ತೀರ ಹತ್ತಿರವಾದ ಯೋಜನೆ ಹಾಗಾಗಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದೇನೆ ಎಂದು ತಿಳಿಸಿದರು.
ಜೆಡಿಎಸ್ ಅಭ್ಯರ್ಥಿ ಬಿ.ಎಸ್.ನಾಗರಾಜು ಮಾತನಾಡಿ ಮುಸ್ಲಿಂ ನಾಯಕರೊಬ್ಬರು ಕಾಂಗ್ರೆಸ್ ತೊರೆದು ಜೆಡಿಎಸ್ ಸಿದ್ದಾಂತ ಒಪ್ಪಿ ಬಂದಿರುವುದು ನಮಗೆಲ್ಲರಿಗೂ ಸಂತಸ ತಂದಿದೆ. ಹಲವಾರು ತಿಂಗಳುಗಳಿಂದ ಸಾವಿರಾರು ಕಾರ್ಯಕರ್ತರುಗಳು ಈಗಾಗಲೇ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಮುಂದಿನ ದಿನಗಳಲ್ಲಿ ರಾಷ್ಟ್ರೀಯ ಪಕ್ಷಗಳನ್ನು ತೊರೆದು ನಮ್ಮ ಜೆಡಿಎಸ್ ಪಕ್ಷದ ಸಿದ್ಧಾಂತಗಳನ್ನು ಒಪ್ಪಿ ಮತ್ತು ಪಂಚರತ್ನ ಯೋಜನೆಯ ಬಗ್ಗೆ ತಿಳಿದು ಜೆಡಿಎಸ್ ನತ್ತ ಹಲವಾರು ರಾಷ್ಟ್ರೀಯ ಪಕ್ಷದ ಮುಖಂಡರುಗಳು ನಮ್ಮ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಅಧ್ಯಕ್ಷ ಚಿಕ್ಕಿರಪ್ಪ, ಮುಖಂಡರಾದ ವಿಜಯಕುಮಾರ್, ಡಿ.ರಘು, ಕಾಂತರಾಜು, ಪ್ರೇಮ್, ಗಂಗಾಧರ್ ಹಾಗೂ ಇನ್ನಿತರರು ಹಾಜರಿದ್ದರು.
ವರದಿ : ಮಡೇನಹಳ್ಳಿ ಮಂಜು.
