ಗುಬ್ಬಿ: ಮಕ್ಕಳಿಗೆ ಮಾನವೀಯ ಮೌಲ್ಯ ಶಿಕ್ಷಣದ ಜೊತೆಯಲ್ಲಿ ಶಿಕ್ಷಣ ಸಂಜೀವಿನಿ ಎಂಬುದನ್ನು ತಿಳಿಸಬೇಕು ಎಂದು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಶೇಖರ ಬಾಬು ತಿಳಿಸಿದರು.
ತಾಲೂಕಿನ ಗ್ರೀನ್ ವುಡ್ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದ ಅವರು ವಿದ್ಯಾರ್ಥಿಗಳು ಆಸಕ್ತಿಯಿಂದ ಅಭ್ಯಾಸ ಮಾಡಿದರೆ ಯಾವುದೂ ಕೂಡ ಕಷ್ಟವಾಗುವುದಿಲ್ಲ ಗ್ರಾಮೀಣ ಭಾಗದ ವಿದ್ಯಾರ್ಥಿಗಳೇ ಇಂದು ದೊಡ್ಡ ಮಟ್ಟದ ಸಾಧನೆ ಮಾಡಿದ್ದಾರೆ ಎಂಬುದಕ್ಕೆ ನೂರಾರು ಉದಾಹರಣೆಗಳಿವೆ ಎಂದು ತಿಳಿಸಿದರು.
ಶಾಲೆಯ ಕಾರ್ಯದರ್ಶಿ ಡಾ. ನವ್ಯ ಬಾಬು ಮಾತನಾಡಿ ಕರೋನ ದಂತಹ ಸಂದರ್ಭದಲ್ಲಿಯೂ ಸಹ ನಮ್ಮ ಶಾಲೆಯ ವಿದ್ಯಾರ್ಥಿಗಳಿಗೆ ಯಾವುದೇ ಶೈಕ್ಷಣಿಕವಾಗಿ ಕೊರತೆ ಆಗದಂತೆ ಆನ್ಲೈನ್ ತರಗತಿಗಳನ್ನು ಮಾಡಿದ್ದೇವೆ ವಿದ್ಯಾರ್ಥಿಗಳಲ್ಲಿ ಅಡಗಿರುವಂತಹ ಪ್ರತಿಭೆಯನ್ನು ಅನಾವರಣ ಮಾಡಲು ವಾರ್ಷಿಕೋತ್ಸವ ಸಮಾರಂಭಗಳು ವೇದಿಕೆಗಳಾಗುತ್ತವೆ ಎಂದು ತಿಳಿಸಿದರು.
ಅತ್ಯಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಶಿವಪ್ರಸಾದ್ ಡಿ, ಸೇರಿದಂತೆ ಶಾಲೆಯ ಎಲ್ಲಾ ಶಿಕ್ಷಕರು ಸಿಬ್ಬಂದಿ ವರ್ಗದವರು ಹಾಗೂ ಪೋಷಕರು ವಿದ್ಯಾರ್ಥಿಗಳು ಹಾಜರಿದ್ದರು.
