ಗುಬ್ಬಿ : ತಿಪಟೂರಿನಲಿ ನಡೆಯುತ್ತಿರುವ 850ನೇ ವರ್ಷದ ಶ್ರೀ ಸಿದ್ದರಾಮೇಶ್ವರ ಜಯಂತಿಯ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಗುಬ್ಬಿಯ ಬಿಜೆಪಿ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಕೋರ್ಟ್ ಸರ್ಕಲ್ ನಲ್ಲಿ ಸ್ವಾಗತಿಸಿದರು.
ಇದೇ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಜಿಎನ್ ಬೆಟ್ಟಸ್ವಾಮಿ, ಪಟ್ಟಣ ಪಂಚಾಯಿತಿ ಅಧ್ಯಕ್ಷ ಅಣ್ಣಪ್ಪ ಸ್ವಾಮಿ, ಸದಸ್ಯ ಶಿವಕುಮಾರ್, ಪ್ರಮೋದ್, ಸೇರಿದಂತೆ ಇನ್ನಿತರರು ಹಾಜರಿದ್ದರು
