ಮಧುಗಿರಿ : ಮಹಿಳೆಯರು ಆರ್ಥಿಕವಾಗಿ ಸಧೃಡವಾದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣವಾಗುತ್ತದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಹಾಲಿ ಶಾಸಕ ಡಾ.ಜಿ.ಪರಮೇಶ್ವರ್ ತಿಳಿಸಿದರು.
ತಾಲೂಕಿನ ಪುರವರ ಹೋಬಳಿಯ ನವಿಲಡುಕು, ಹುಣಸವಾಡಿ, ಚುಂಚೇನಹಳ್ಳಿ ಹಾಗೂ ತಿಮ್ಮಲಾಪುರ ಗ್ರಾಮಗಳಲ್ಲಿ ನೂತನ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಗಳ ಉದ್ಘಾಟನೆ ಹಾಗೂ ಹಾಲು ಶೇಖರಣಾ ಘಟಕಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಹೈನುಗಾರಿಕೆ ದೇಶದಲ್ಲಿ ಆರ್ಥಿಕ ಕ್ರಾಂತಿ ಉಂಟುಮಾಡುತ್ತಿದ್ದು, ಹೈನುಗಾರಿಕೆಗೆ ಮಹಿಳೆಯರು ಹೆಚ್ಚು ಒತ್ತು ನೀಡುತ್ತಿರುವುದರಿಂದ ಗ್ರಾಮೀಣ ಭಾಗದಲ್ಲಿ ಜನರ ಜೀವನ ಮಟ್ಟ ಸುಧಾರಣೆಯಾಗುತ್ತಿದೆ. ಗ್ರಾಮೀಣ ಭಾಗದ ಜನರು ತಮ್ಮ ಮಕ್ಕಳನ್ನು ಉತ್ತಮ ವಿಧ್ಯಾವಂತರನ್ನಾಗಿಸಿ ಉತ್ತಮ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಬೇಕು ಎಂದು ಕರೆ ನೀಡಿದರು.
ನಾನು ಶಿಕ್ಷಣ ಸಚಿವನಾಗಿದ್ದ ಸಂದರ್ಭದಲ್ಲಿ ತುಮಕೂರು ವಿಶ್ವವಿದ್ಯಾನಿಲಯವನ್ನು ಮಂಜೂರು ಮಾಡಿಸಿದ್ದೆ. ಗೃಹ ಸಚಿವನಾಗಿದ್ದ ಅವಧಿಯಲ್ಲಿ ಕೊರಟಗೆರೆಯ ಬಳಿ 500 ಕೋಟಿ ರೂ ವೆಚ್ಚದಲ್ಲಿ 12 ನೇ ಬೆಟಾಲಿಯನ್ ಪೆÇಲೀಸ್ ತರಬೇತಿ ಕೇಂದ್ರವನ್ನು ಮಂಜೂರು ಮಾಡಿಸಿದ್ದೆ. ಅಲ್ಲಿ ಪ್ರತಿ ವರ್ಷ 1 ಸಾವಿರ ಜನರು ಪೆÇಲೀಸ್ ತರಬೇತಿ ಪಡೆಯುತ್ತಿದ್ದಾರೆ. ನೀರಾವರಿ ಯೋಜನೆಗಳಿಗಾಗಿ 68 ಸಾವಿರ ಕೋಟಿ ರೂ ಗಳನ್ನು ನಮ್ಮ ಕಾಂಗ್ರೆಸ್ ಸರಕಾರದ ಅವಧಿಯಲಿ ನೀಡಿದ್ದು, ತಾಲೂಕಿನ 109 ಕೆರೆಗಳಿಗೆ ಎತ್ತಿನ ಹೊಳೆ ಹಾಗೂ ಭದ್ರ ಮೇಲ್ದಂಡೆ ಯೋಜನೆಗಳ ಮೂಲಕ ನೀರು ಬರಲಿದೆ ಎಂದರು.
ಮಧುಗಿರಿ ಹಾಗೂ ಕೊರಟಗೆರೆ ಕ್ಷೇತ್ರದ ಜನರ ಆಶೀರ್ವಾದದಿಂದ ನಾನು ರಾಜ್ಯದ ಉಪಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿದ್ದೆ. ಈ ಕ್ಷೇತ್ರದ ಜನರ ಋಣ ನನ್ನ ಮೇಲಿದ್ದು, ಅವರ ಋಣ ತೀರಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಮುಂದಿನ ದಿನಗಳಲ್ಲಿ ನಿಮ್ಮೆಲ್ಲರ ಸಹಕಾರದಿಂದ ಇನ್ನಷ್ಟು ಅಭಿವೃದ್ದಿ ಕಾರ್ಯಗಳನ್ನು ಮಾಡಲಿದ್ದು, ನಿಮ್ಮೆಲ್ಲರ ಆಶೀರ್ವಾದ ನನ್ನ ಮೇಲಿರಲಿ ಎಂದರು.
ತುಮುಲ್ ಮಾಜಿ ಅಧ್ಯಕ್ಷ ಹಾಗೂ ಹಾಲಿ ನಿರ್ದೇಶಕ ಕೊಂಡವಾಡಿ ಚಂದ್ರಶೇಖರ್ ಮಾತನಾಡಿ, ತಾಲೂಕಿನಲ್ಲಿ ಹಾಲು ಉತ್ಪಾದಕರಿಗೆ ರೈತ ಕಲ್ಯಾಣ ಟ್ರಸ್ಟ್ ಸ್ಥಾಪಿಸಿ ಅನೇಕ ಸವಲತ್ತುಗಳನ್ನು ಒದಗಿಸಲಾಗುತ್ತಿದೆ. ಸಕಾಲಕ್ಕೆ ಬಟವಾಡೆ ಮಾಡಲಾಗುತ್ತಿದೆ. ಈಗಾಗಲೇ ಜನರ ಬೇಡಿಕೆಯಂತೆ ಅನೇಕ ಗ್ರಾಮಗಳಲ್ಲಿ ನೂತನ ಹಾಲು ಉತ್ಪಾದಕರ ಸಹಕಾರ ಸಂಘಗಳನ್ನು ಪ್ರಾರಂಭಿಸಲಾಗಿದ್ದು, ನೂತನ ಘಟಕಗಳಿಗೆ 1 ಲಕ್ಷ ರೂ ಮೌಲ್ಯದ ಕಂಪ್ಯೂಟರ್ ಹಾಗೂ ಪರಿಕರಗಳನ್ನು ಒದಗಿಸಲಾಗಿದೆ. ಒಕ್ಕೂಟದಿಂದ ಕಟ್ಟಡ ನಿರ್ಮಾಣಕ್ಕಾಗಿ 5 ಲಕ್ಷ ರೂ ಗಳನ್ನು ನೀಡಲಾಗುವುದು ಎಂದ ಅವರು, ಹಾಲು ಉತ್ಪಾದಕರು ಉತ್ತಮ ಗುಣಮಟ್ಟದ ಹಾಲನ್ನು ನೀಡುವುದರ ಮೂಲಕ ಒಕ್ಕೂಟದ ಏಳಿಗೆಗೆ ಸಹಕರಿಸಬೇಕು ಎಂದರು.
ಬಾಕ್ಸ್ -
ತುಮುಲ್ ಮಾಜಿ ಅಧ್ಯಕ್ಷ ಹಾಗೂ ಹಾಲಿ ನಿರ್ದೇಶಕ ಕೊಂಡವಾಡಿ ಚಂದ್ರಶೇಖರ್ ಅವರು ಕ್ಷೇತ್ರದ ಜನತೆಯೊಂದಿಗೆ ಉತ್ತಮ ಸಂಪರ್ಕ ಹೊಂದಿದ್ದು, ರೈತ ಕಲ್ಯಾಣ ಟ್ರಸ್ಟ್ ಸ್ಥಾಪಿಸುವುದರ ಮೂಲಕ ಅನೇಕ ಸವಲತ್ತುಗಳನ್ನು ಒದಗಿಸುತ್ತಿದ್ದಾರೆ. ಅವರ ಸೇವೆ ಕ್ಷೇತ್ರದ ಜನತೆಗೆ ಇನ್ನಷ್ಟು ಸಿಗಲಿ. - ಡಾ.ಜಿ.ಪರಮೇಶ್ವರ್. ಮಾಜಿ ಉಪಮುಖ್ಯಮಂತ್ರಿ ಹಾಗೂ ಹಾಲಿ ಶಾಸಕರು.
ಬಾಕ್ಸ್ -
ಮಾಜಿ ಉಪಮುಖ್ಯಮಂತ್ರಿ ಹಾಗೂ ಹಾಲಿ ಶಾಸಕರಾದ ಡಾ.ಜಿ.ಪರಮೇಶ್ವರ್ ಅವರು ಸರಳ ಸಜ್ಜನಿಕೆಯ ವ್ಯಕ್ತಿಯಾಗಿದ್ದು, ಮಧುಗಿರಿ ಹಾಗೂ ಕೊರಟಗೆರೆ ಕ್ಷೇತ್ರದಲ್ಲಿ ಅನೇಕ ಜನಪರ ಹಾಗೂ ಶಾಶ್ವತ ಕೆಲಸಗಳನ್ನು ಮಾಡಿದ್ದಾರೆ. ಕ್ಷೇತ್ರದ ಜನತೆಯ ಆಶೀರ್ವಾದದಿಂದ ಅವರು ಮುಂದಿನ ದಿನಗಳಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ. - ಕೊಂಡವಾಡಿ ಚಂದ್ರಶೇಖರ್, ತುಮುಲ್ ಮಾಜಿ ಅಧ್ಯಕ್ಷ ಹಾಗೂ ಹಾಲಿ ನಿರ್ದೇಶಕ.
ಈ ಸಂದರ್ಭದಲ್ಲಿ ಜಿ.ಪಂ ಸದಸ್ಯ ಹೆಚ್.ಕೆಂಚಮಾರಯ್ಯ, ಪುರಸಭಾ ಸದಸ್ಯರಾದ ಎಂ.ಆರ್.ಜಗನ್ನಾಥ್, ಎಂ.ಎಸ್.ಚಂದ್ರಶೇಖರ್, ಪಿಎಲ್ಡಿ ಬ್ಯಾಂಕ್ ಉಪಾಧ್ಯಕ್ಷ ಭೈರಪ್ಪ, ಮುಖಂಡರಾದ ಬಲರಾಮಯ್ಯ, ಶಿವಶಂಕರ್, ಆಶ್ವಥ್, ಎಂ.ಜಿ.ಶ್ರೀನಿವಾಸಮೂರ್ತಿ, ಹೆಚ್.ಎನ್.ಅಶ್ವತ್ಥ್, ಮೈಲಾರಪ್ಪ, ನಾಗರಾಜು, ವೆಂಕಟಾಚಲಯ್ಯ, ನಾಗೇಶ್, ಲಕ್ಷ್ಮೀದೇವಿ ತಿಮ್ಮಯ್ಯ, ಸಾವಿತ್ರಮ್ಮ, ಮಂಜುಳ, ಲೋಕೇಶ್ ಗೌಡ, ನಾಗರಾಜು, ವಿಸ್ತರಣಾಧಿಕಾರಿಗಳಾದ ಶಂಕರ್ ನಾಗ್, ಡಾ.ದೀಕ್ಷಿತ್, ಧರ್ಮವೀರ್, ಮಹಾಲಕ್ಷ್ಮಿ, ಮಾರೇಗೌಡ, ಸಹಕಾರ ಇಲಾಖೆಯ ನಿಭಂಧಕ ಸಣ್ಣಪ್ಪಯ್ಯ ಹಾಗೂ ಡೇರಿಯ ಅಧ್ಯಕ್ಷರು, ನಿರ್ದೇಶಕರು ಹಾಗೂ ಗ್ರಾಮಸ್ಥರು ಇದ್ದರು.
ವರದಿ : ಮಧುಗಿರಿ ಬಾಲುಪಣಿಂದ್ರ.
