ಶಿರಾ: ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ಯಶಸ್ವಿ.
ತಾಲೂಕಿನ ಕಸಬಾ ಹೋಬಳಿ ವಾಪ್ತಿಯ ಲಕ್ಷ್ಮಿಸಾಗರ ಗ್ರಾಮದಲ್ಲಿ ಆಯೋಜಿಸಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮವನ್ನು
ತಾಲೂಕು ಮಟ್ಟದ ಅಧಿಕಾರಿಗಳ ಸಹಯೋಗದೊಂದಿಗೆ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ಕ್ಷೇತ್ರದ ಶಾಸಕರು ಸೇರಿದಂತೆ
ಶ್ರೀಮತಿ ಮಮತಾ.
ಗ್ರೇಡ್ 2 ತಹಶೀಲ್ದಾರ್ ಮಂಜುನಾಥ್ ಸ್ಥಳೀಯ ಗ್ರಾಮ ಪಂಚಾಯತಿ ಸದಸ್ಯರು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಜ್ಯೋತಿ ಬೆಳಗುವ ಮುಖಾಂತರ ಉದ್ಘಾಟಿಸಿದರು..
ಗ್ರಾಮದ ಸಮಸ್ಯೆಗಳನ್ನು ಆಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖೆಗಳಿಗೆ ಸೂಚಿಸಿದರು ಕಂದಾಯ ಇಲಾಖೆಯು ಮನಸ್ವಿನಿ ಹಾಗೂ ಸಂಧ್ಯಾ ಸುರಕ್ಷಾ ಯೋಜನೆಯಡಿ ಹಾಗೂ ಇಂದಿರಾಗಾಂಧಿ ವೃದ್ಧಾಪ್ಯ ವೇತನ ಯೋಜನೆ ಅಡಿಯಲ್ಲಿ ಫಲಾನುಭವಿಗಳಿಗೆ ಪಿಂಚಣಿ ಆದೇಶದ ಪ್ರತಿಯನ್ನು ವಿತರಿಸಿದರು.
.ಕಾರ್ಯಕ್ರಮದಲ್ಲಿ ಮಾತನಾಡಿದ ತಹಶಿಲ್ದಾರರ ಮಮತಾ ಎಲ್ಲ ಇಲಾಖೆ ಅಧಿಕಾರಿಗಳು ತಮ್ಮ ಇಲಾಖೆಯಿಂದ ನೀಡುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿ ಸದುಪಯೋಗ ಪಡಿಸಿಕೊಳ್ಳುವಂತೆ ಮಾಹಿತಿ ನೀಡಿದರು ನಿಮಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆಯೂ ನಮ್ಮ ಗಮನಕ್ಕೆ ತನ್ನಿ ನಾವು ಸೂಕ್ತ ಕ್ರಮ ಕೈಗೊಂಡು ಸಮಸ್ಯೆಯನ್ನು ಪರಿಹರಿಸುತ್ತೇವೆ ಎಂದು ತಿಳಿಸಿದರು.
ವೇದಿಕೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಗ್ರಾಮ ಪಂಚಾಯಿತಿಯ ಸದಸ್ಯರು ಸಿಬ್ಬಂದಿ ವರ್ಗ ಕಸಬಾ ಹೋಬಳಿ ಕಂದಾಯ ವೃತ್ತ ನಿರೀಕ್ಷಕ ಮಂಜುನಾಥ್ ಸೇರಿದಂತೆ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಲಕ್ಷ್ಮಿ ಸಾಗರ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಹಾಜರಿದ್ದರು.
ವರದಿ : ಶಿರಾ ಶ್ರೀಮಂತ್.
