ಶಿರಾ: ಬಿಜೆಪಿ ಆಡಳಿತಕ್ಕೆ ಬಂದ ನಂತರ ಬೆಲೆ ಏರಿಕೆಯಿಂದಾಗಿ ಜನರಿಗೆ ಕಷ್ಟವಾಗಿದೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜನರ ಜೀವನ ಸುಗಮಗೊಳಿಸಲು ವಿವಿಧ ಯೋಜನೆಯ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ರಾಜ್ಯದ ಎಲ್ಲ ಕುಟುಂಬಗಳಿಗೆ ವಿತರಿಸಲಾಗುವುದು ಎಂದು ಮಾಜಿ ಸಚಿವ ಟಿ.ಬಿ.ಜಯಚಂದ್ರ ಹೇಳಿದರು.
ಮಹಿಳೆಯರಿಗೆ ಪ್ರತಿ ತಿಂಗಳು ₹2 ಸಾವಿರ, ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ಮತ್ತು 10 ಕೆಜಿ ಅಕ್ಕಿ ನೀಡಲು ಕಾಂಗ್ರೆಸ್ ತೀರ್ಮಾನಿಸಿದೆ. ಅದರ ಗ್ಯಾರಂಟಿ ಕಾರ್ಡನ್ನು ಶಿರಾ ತಾಲೂಕಿನಲ್ಲಿ ಬ್ಯಾಕ್ ಕಾಂಗ್ರೆಸ್
ನೇತೃತ್ವದಲ್ಲಿ ವಿತರಿಸಿ ಮಾತನಾಡಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಹೇಳಿದ ಜನಪರ ಯೋಜನೆಗಳನ್ನು ಶೇಕಡ 100ರಷ್ಟು ಜನರಿಗೆ ತಲುಪಿಸಲಾಗಿದೆ. ಬಿಜೆಪಿ ಬೆಲೆ ಏರಿಕೆ, ದುಬಾರಿ ಟ್ಯಾಕ್ಸ್ ಹಾಕಿದ್ದು ಬಿಟ್ಟರೆ ಜನಪರ ಯೋಜನೆ ಕಾರ್ಯರೂಪಕ್ಕೆ ತರಲು ಸಾಧ್ಯವಾಗಲಿಲ್ಲ ಎಂದು ದೂರಿದರು.
ಈ ಸಂದರ್ಭದಲ್ಲಿ ತಾಲ್ಲೂಕಿನ ಕಾಂಗ್ರೆಸ್ ಪಕ್ಷದ ವಿವಿಧ ಕಾರ್ಯಕರ್ತರು ಸೇರಿದಂತೆ ವಿವಿಧ ಪದಾಧಿಕಾರಿಗಳು
ಹಾಜರಿದ್ದರು.
ವರದಿ : ಶಿರಾ ಶ್ರೀಮಂತ್
