ಮಧುಗಿರಿ : ಸಂಘಟನೆಯಲ್ಲಿ ಶಕ್ತಿಯಿದ್ದೂ ಸಂಘಟನೆಯಿಂದ ಮಾತ್ರ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿ ಸಾದ್ಯ ಎಂದು ಮಾಜಿ ಶಾಸಕ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಎನ್. ರಾಜಣ್ಣ ಅಭಿಪ್ರಾಯ ಪಟ್ಟರು.
ಪಟ್ಟಣದ ಎಂ ಎನ್ ಕೆ ಸಮುದಾಯ ಭವನದಲ್ಲಿ ಬುಧವಾರ ಅಗ್ನಿವಂಶ ಕ್ಷತ್ರಿಯ (ತಿಗಳ) ಜನಾಂಗದ ವತಿಯಿಂದ ಹಮ್ಮಿಕೊಂಡಿದ್ದ ಜಾಗೃತಿ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು ತಳ ಸಮುದಾಯಗಳಿಗೆ ರಾಜಕೀಯ ಪ್ರಾತಿನಿದ್ಯ ದೊರಕಿಸಿಕೊಡಲು ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಇತಿಹಾಸವನ್ನು ಅರಿತವರು ಮಾತ್ರ ಇತಿಹಾಸ ಸೃಷ್ಟಿಸಲು ಸಾದ್ಯ. ತಳ ಸಮುದಾಯಗಳು ಸಂಘಟನೆಯಾಗಬೇಕು. ಅಗ್ನಿವಂಶ ಕ್ಷತ್ರಿಯ ಸಮುದಾಯ ನನ್ನ ಮೇಲೆ ಇಟ್ಟಿರುವ ನಿರೀಕ್ಷೆಗೆ ತಕ್ಕಂತೆ ಕೆಲಸ ನಿರ್ವಹಿಸುತ್ತೇನೆ. ಜನಪರವಾಗಿ ಕೆಲಸ ಕಾರ್ಯಗಳನ್ನು ಮಾಡಿದಾಗ ಮಾತ್ರ ಜನರು ಗುರುತಿಸುತ್ತಾರೆ. ಹೋರಾಟದ ಮನೋಭಾವ ಇದ್ದವರು ಮಾತ್ರ ಸಾರ್ವಜನಿಕ ಜೀವನದಲ್ಲಿ ಯಶಸ್ವಿಯಾಗಲು ಸಾದ್ಯ ಎಂದರು.
ಜಿಲ್ಲೆ ಹಾಗೂ ತಾಲೂಕಿನ ಆಗ್ನಿ ವಂಶದ ಸಮುದಾಯದವರು ಇತರೆ ಸಮುದಾಯದವರೊಂದಿಗೆ ಅನ್ಯೋನ್ಯತೆಯಿಂದ ಜೀವನ ನಿರ್ವಹಿಸುತ್ತಿದ್ದು , ಪ್ರತಿಯೊಬ್ಬರು ತಮ್ಮ ಮಕ್ಕಳನ್ನು ವಿದ್ಯಾವಂತರನ್ನಾಗಿಸಿ ಸಮಾಜಕ್ಕೆ ಆಸ್ತಿಯನ್ನಾಗಿ ಮಾಡಬೇಕೆಂದರು.
ಕೃಷಿ ಉತ್ಪನ್ನಗಳ ಸಂಸ್ಕರಣೆ ಮತ್ತು ರಫ್ತು ನಿಗಮದ ಅಧ್ಯಕ್ಷ ಮಾಜಿ ರೇವಣಸಿದ್ದಯ್ಯ ಮಾತನಾಡಿ ತಿಗಳ ಸಮುದಾಯದವರು ಸ್ವಾಭಿಮಾನಿಗಳಾಗಿದ್ದು, ಸರ್ಕಾರ ಎಲ್ಲ ಅನುಕೂಲಗಳನ್ನು ಮುಂದುವರಿದ ಜನಾಂಗದವರಿಗೇ ಮಾಡಲಾಗುತ್ತಿದ್ದು, ಆದರೆ ತಿಗಳ ಸಮುದಾಯದ ಅಭಿವೃದ್ಧಿ ನಿಗಮ ಮಾಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಸಿದ್ದರಾಮಯ್ಯ ನವರು ಇಡೀ ಕರ್ನಾಟಕಕ್ಕೆ ಅನ್ನ ನೀಡಿದವರು. ಅನ್ನಭಾಗ್ಯ ಯೋಜನೆಯಂದ ಬಿಕ್ಷುಕರ ಸಂಖ್ಯೆ ಕಡಿಮೆಯಾಗಿದೆ ಎಂದ ಅವರು ಈ ಬಾರಿ ಕೆ.ಎನ್. ರಾಜಣ್ಣನವರನ್ನು ಬಹುಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದರು.
ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಜಿ.ಜೆ.ರಾಜಣ್ಣ , ಜಿ.ಪಂ ಮಾಜಿ ಸದಸ್ಯ ಡಿ. ಅರ್ಜುನ್ , ಪುರಸಭೆಯ ಮಾಜಿ ಅಧ್ಯಕ್ಷರುಗಳಾದ ಎಂ ಕೆ ನಂಜುಂಡಯ್ಯ , ಕೆ ಪ್ರಕಾಶ್ , ಮಾಜಿ ಗ್ರಾ.ಪಂ ಸದಸ್ಯ ಸಿದ್ದಾಪುರ ವೀರಣ್ಣ , ತಾಲೂಕು ಕಾರ್ಯದರ್ಶಿ ರಾಮಕೃಷ್ಣಯ್ಯ , ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು , ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ತಿಗಳ ಸಮುದಾಯದವರು ಹಾಜರಿದ್ದರು.
ವರದಿ ಮಧುಗಿರಿ ಬಾಲು ಪಣಿಂದ್ರ.
