ಗುಬ್ಬಿ : ಪ್ರತಿ ತಿಂಗಳ ಮೂರನೇ ಶನಿವಾರದಂದು ಸರ್ಕಾರವು ರೈತರ ಮನೆಯ ಬಾಗಿಲಿಗೆ ತೆರಳಿ ಸರ್ಕಾರದ ಯೋಜನೆಗಳ ಬಗ್ಗೆ ಪರಿಶೀಲಿಸಿ ತಲುಪಿಸುವ ಕಾರ್ಯಕ್ರಮವೇ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಎಂದು ತಹಶೀಲ್ದಾರ್ ಬಿ ಆರತಿ ತಿಳಿಸಿದರು.
ಚೇಳೂರು ಹೋಬಳಿ ಗುಡ್ಡದಹಳ್ಳಿ ಗ್ರಾಮದ ರಂಗನಾಥ ಸ್ವಾಮಿ ದೇವಾಲಯದ ಬಳಿ ತಾಲೂಕು ಆಡಳಿತ ಹಮ್ಮಿಕೊಂಡಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮವನ್ನು ಪಲಾನುಭವಿಗಳಿಗೆ ಪಿಂಚಣಿ ಸೌಲಭ್ಯದ ಪತ್ರವನ್ನು ನೀಡುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಹೋಬಳಿಯ ಗಡಿಭಾಗದ ಗ್ರಾಮಗಳನ್ನು ಆಯ್ಕೆ ಮಾಡಿ ತಾಲ್ಲೂಕು ಆಡಳಿತವೇ ಆ ಗ್ರಾಮಕ್ಕೆತಹಶೀಲ್ದಾರ್ ಬಿ ಆರತಿ ತೆರಳಿ ಸರ್ಕಾರದ ಯೋಜನೆಗಳನ್ನು ತಲುಪಿಸುವ ನಿಟ್ಟಿನಲ್ಲಿ ಸರ್ಕಾರವು ಮುಂದಾಗಿದ್ದು, ಅದನ್ನು ಸದುಪಯೋಗಪಡಿಸಿಕೊಳ್ಳುವಂತೆ ಕರೆ ನೀಡಿ ಗಡಿಭಾಗದ ಪ್ರದೇಶಗಳಿಂದ ನಗರಕ್ಕೆ ತೆರಳಲು ಸಾಧ್ಯವಾಗದೆ ಇರುವ ಕಾರಣ ಸರ್ಕಾರವೇ ರೈತರ ಬಳಿ ಬಂದಿದ್ದು, ಮನೆ ಮನೆಗೆ ಗ್ರಾಮ ಲೆಕ್ಕಿಗರು ತೆರಳಿ ಪಿಂಚಣಿ ವ್ಯವಸ್ಥೆಯನ್ನು ಮಾಡಲಾಗುತ್ತಿದೆ ಎಂದು ತಿಳಿಸಿದ ಅವರು ಚೇಳೂರು ಹೋಬಳಿಯ ವ್ಯಾಪ್ತಿಯಲ್ಲಿ ಪಿಂಚಣಿ 29 ಸಿಡಿಪಿಓ ಇಲಾಖೆಯಿಂದ ಐದು ಭಾಗ್ಯ ಲಕ್ಷ್ಮೀ ಬಾಂಡ್ ಗಳನ್ನು ವಿತರಿಸಿದ್ದು, ವಿವಿಧ ಪಿಂಚಣಿ ವ್ಯವಸ್ಥೆಯನ್ನು ಗ್ರಾಮ ಲೆಕ್ಕಿಗರು ತಮ್ಮ ಮನೆ ಮನೆಗೆ ಬಂದು ಮಾಡಿಕೊಡುತ್ತಾ ಇದ್ದು ಅದನ್ನು ಬಳಸಿಕೊಳ್ಳುವಂತೆ ತಿಳಿಸಿದ ಅವರು ಪ್ರತಿಯೊಂದು ಹೆಜ್ಜೆಯಲ್ಲೂ ಸರ್ಕಾರವು ಜನರಿಗೆ ಹತ್ತಿರವಾಗುವ ನಿಟ್ಟಿನಲ್ಲಿ ಮುಂದಾಗಿದ್ದು, ಎಲ್ಲಾ ಸಮಸ್ಯೆಗಳನ್ನು ಅಧಿಕಾರಿಗಳೇ ಸ್ವಯಂ ಪ್ರೇರಿತವಾಗಿ ಸಮಸ್ಯೆಯನ್ನು ಬಗೆಹರಿಸುವ ಪ್ರಯತ್ನವನ್ನು ಮಾಡಲಾಗುತ್ತಿದೆ ಎಂದು ತಿಳಿಸಿದರು.
ಇದೇ ವೇಳೆ ತಾಲ್ಲೂಕು ಮಟ್ಟದ ಅಧಿಕಾರಿಗಳು ತಮ್ಮ ಇಲಾಖೆಯ ಯೋಜನೆಗಳಲ್ಲಿ ಸಿಗುವ ಸವಲತ್ತುಗಳು ತಿಳಿಸುವ ಪ್ರಯತ್ನವನ್ನು ಮಾಡಿದರು.
ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆಗೆ ಕಾರ್ಯಕ್ರಮದಲ್ಲಿ ಒಟ್ಟು 17 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ಗ್ರಾಮ ಪಂಚಾಯತ್ ಹಾಗೂ ಬೆಸ್ಕಾಂ ಹಾಗೂ ಸಾಮಾಜಿಕ ವಲಯ ಅರಣ್ಯ ಹಾಗೂ ಕಂದಾಯ ಇಲಾಖೆಗೆ ಸಂಬಂಧಿತ ಅರ್ಜಿಗಳು ಅತಿ ಹೆಚ್ಚು ಸ್ವೀಕೃತವಾಗಿದೆ.
ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶಶಿಕಲಾ, ಇಒ ಪರಮೇಶ್, ಅರೋಗ್ಯ ಅಧಿಕಾರಿ ಬಿಂದು ಮಾಧವ್, ಕಂದಾಯ ನೀರಿಕ್ಷಕ ಆರ್.ಜಿ. ನಾಗಭೂಷಣ್, ಎಲ್ಲಾ ತಾಲ್ಲೂಕು ಮಟ್ಟದ ಅಧಿಕಾರಿಗಳು ಗ್ರಾಮ ಲೆಕ್ಕಿಗರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ವರದಿ : ಸಂಜಯ್ ಕೊಪ್ಪ
