ಬಿಜೆಪಿ ಹಾಗೂ ಜೆಡಿಎಸ್ ನ ಇಬ್ಬರು ಮಾಜಿ ಶಾಸಕರು ಕಾಂಗ್ರೆಸ್ ಸೇರ್ಪಡೆ.

 ತುಮಕೂರಿನ ಮಾಜಿ ಶಾಸಕ, ಬಿಜೆಪಿಯ ಕಿರಣ್ ಕುಮಾರ್ ಮತ್ತು ಜೆಡಿಎಸ್ ಮುಖಂಡ ಹಾಗೂ ಮಾಜಿ ಶಾಸಕ ಎಚ್.ನಿಂಗಪ್ಪ ಅವರು ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು.



ಇದೇ ವೇಳೆ ವಿಧಾನ ಪರಿಷತ್ತಿನ ಮಾಜಿ ಸದಸ್ಯ, ಜೆಡಿಎಸ್ ಮುಖಂಡ ಮೈಸೂರಿನ ಸಂದೇಶ್ ನಾಗರಾಜ್ ಕೂಡ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.


ಬಿಜೆಪಿಯ ಕಿರಣ್ ಕುಮಾರ್ ಮತ್ತು ಜೆಡಿಎಸ್ ಮುಖಂಡ ಎಚ್.ನಿಂಗಪ್ಪ ಇಬ್ಬರು ಕಾಂಗ್ರೆಸ್ ಸೇರ್ಪಡೆಗೊಂಡಿರುವುದು ಪಕ್ಷಕ್ಕೆ ಬಲಬಂದಂತೆ ಆಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.


ಈ ಮೂವರು ಮಾಜಿ ಶಾಸಕರು ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ಸೇರ್ಪಡೆಯಾದರು. ಈ ಮೂವರು ನಾಯಕರನ್ನು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕಿರಣ್ ಕುಮಾರ್ ಹಾಗೂ ನಾಗರಾಜ್ ಅವರಿಗೆ ಬಾವುಟ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

Please Select Embedded Mode To Show The Comment System.*

ನವೀನ ಹಳೆಯದು