ಮಧುಗಿರಿ - ಫೆ.12 ರಂದು ಮಧುಗಿರಿ ಪಟ್ಟಣದಲ್ಲಿ ಕರುನಾಡು ವಿಜಯಸೇನೆ ವತಿಯಿಂದ ಹಮ್ಮಿಕೊಂಡಿರುವ ಮಧುಗಿರಿ ಸಾಂಸ್ಕøತಿಕ ಸಂಭ್ರಮ ಕಾರ್ಯಕ್ರಮದಲ್ಲಿ ಯುವ ಜೆಡಿಎಸ್ ರಾಜ್ಯಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಾಗೂ ಚಲನಚಿತ್ರ ನಟ ಧೃವಸರ್ಜಾ ಭಾಗವಹಿಸಲಿದ್ದಾರೆ ಎಂದು ಕರುನಾಡು ವಿಜಯಸೇನೆ ತಾಲೂಕು ಅಧ್ಯಕ್ಷ ತಿಮ್ಮರಾಜು ತಿಳಿಸಿದ್ದಾರೆ.
ಪಟ್ಟಣದ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಬೆಳಗ್ಗೆ 10 ರಿಂದ ಸಂಜೆ 3 ಗಂಟೆಯವರೆಗೂ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಸಂಜೆ 5 ಗಂಟೆಯಿಂದ ಬೆಂಗಳೂರಿನ ಹೆಸರಾಂತ ಶ್ರೀ ಮಂಜುನಾಥ ಇವೆಂಟ್ಸ್ ರವರಿಂದ ರಸಸಂಜೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಎಂ.ವಿ.ವೀರಭದ್ರಯ್ಯ ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರುನಾಡು ವಿಜಯಸೇನೆ ಸಂಸ್ಥಾಪಕ ಹೆಚ್.ಎನ್.ದೀಪಕ್ ವಹಿಸಲಿದ್ದು, ರಸಮಂಜರಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಯುವ ಜೆಡಿಎಸ್ ರಾಜ್ಯಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಾಗೂ ಚಲನಚಿತ್ರ ನಟ ಧೃವಸರ್ಜಾ, ತುಮುಲ್ ಮಾಜಿ ಅಧ್ಯಕ್ಷ ಕೊಂಡವಾಡಿ ಚಂದ್ರಶೇಖರ್, ಕೆ.ಎ.ಎಸ್ ಅಧಿಕಾರಿ ಪಾತರಾಜು, ಜಿ.ಪಂ ಮಾಜಿ ಸದಸ್ಯ ಕೆಂಚಮಾರಯ್ಯ, ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಟ್ರಸ್ಟ್ ಯೋಜನಾಧಿಕಾರಿ ದಿನೇಶ್, ಮುಖಂಡ ತುಂಗೋಟಿ ರಾಮಣ್ಣ, ಪುರಸಭಾ ಸದಸ್ಯ ಎಂ.ಆರ್.ಜಗನ್ನಾಥ್ ಹಾಗೂ ಮುಂತಾದವರು ಭಾಗವಹಿಸಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಡಬೇಕೆಂದು ಮನವಿ ಮಾಡಿದ್ದಾರೆ.
ವರದಿ : ಮಧುಗಿರಿ ಬಾಲುಪಣಿಂದ್ರ.
