ಪಾವಗಡ: ಇಂದಿನ ವಿಧ್ಯಾರ್ಥಿಗಳಲ್ಲಿ ಭಾಷೆ ಮತ್ತು ಸಾಹಿತ್ಯದ ಬಗೆಗಿನ ಒಲವು ಅತ್ಯಂತ ಕನಿಷ್ಟ ಮಟ್ಟದಲ್ಲಿರುವುದು ಬೇಸರ ಮೂಡಿಸಿದೆ ಎಂದು ಸಾಹಿತಿ ಬ್ಯಾಡನೂರು ಚೆನ್ನಬಸವಣ್ಣ ತಿಳಿಸಿದರು.
ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಪಾವಗಡ ವತಿಯಿಂದ ಸ್ವಾಮಿ ವಿವೇಕಾನಂದ ಪ್ರಥಮ ದರ್ಜೆ ಕಾಲೇಜಿನಲ್ಲಿ ಶ್ರೀಮತಿ ಸಾಕಮ್ಮ ಶ್ರೀ ಗಂಗಿನೇನಿ ರಾಮಯ್ಯ ಸ್ಮರಣಾರ್ಥ ದತ್ತಿ ಹಾಗೂ ಡಾ. ವಿ ಕೆ ಚೌದರಿ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಪಂಪನಿಂದ ಕುವೆಂಪು ವರೆಗಿನ ಕನ್ನಡ ಸಾಹಿತ್ಯ ಪರಂಪರೆ ಅಗಾಧವಾದದ್ದು ವಿದ್ಯಾರ್ಥಿಗಳು ಸಾಹಿತ್ಯವನ್ನು ಓದುವ ಮೂಲಕ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು ಎಂದು ತಿಳಿಸಿದರು.
ಖ್ಯಾತ ಕಲಾವಿದರಾದ ಟಿ. ಗಂಗಯ್ಯನವರು ಮಾತನಾಡಿ ಗಡಿನಾಡ ಭಾಗದಲ್ಲಿ ಕನ್ನಡ ಭಾಷಾಭಿವೃದ್ಧಿಗೆ ಹೆಚ್ಚು ಒತ್ತು ನೀಡಬೇಕು , ಕನ್ನಡ ಮಾತನಾಡುವುದರ ಮೂಲಕ ಕನ್ನಡತನವನ್ನು ಬೆಳೆಸಿಕೊಳ್ಳಬೇಕೆಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕಟ್ಟಾ ನರಸಿಂಹಮೂರ್ತಿ ಗಡಿ ಭಾಗದಲ್ಲಿ ಕನ್ನಡದ ಅಸ್ಮಿತೆಯನ್ನು ಉಳಿಸುವ ಕೆಲಸವನ್ನು ಸಾಹಿತ್ಯ ಪರಿಷತ್ತು ಸದಾ ಮಾಡಿಕೊಂಡು ಬರುತ್ತಿದೆ ತುಮಕೂರು ಜಿಲ್ಲೆಯಲ್ಲಿ ಅತಿ ಹೆಚ್ಚು ದತ್ತಿಗಳನ್ನು ತಾಲ್ಲೂಕಿನಲ್ಲಿ ನೀಡಲಾಗಿದೆ ಎಂದು ತಿಳಿಸಿದರು.
ದತ್ತಿ ಉಪನ್ಯಾಸ ಕಾರ್ಯಕ್ರಮಗಳು ತಾಲ್ಲೂಕಿನಲ್ಲಿ ಕನ್ನಡಪರ ವಾತಾವರಣ ನಿರ್ಮಿಸಲು ಸಹಕಾರಿಯಾಗಿವೆ ಎಂದರು.
ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ನ ಅಧ್ಯಕ್ಷ ಕಟ್ಟಾ ಸುಬ್ರಮಣ್ಯ ನಾಯ್ಡು, ಪ್ರಾಂಶುಪಾಲರಾದ ಚಂದ್ರಶೇಖರ್, ಐ. ಎ. ನಾರಯಣಪ್ಪ, ಟಿ.ಗಂಗಯ್ಯ, ಉಪನ್ಯಾಸಕ ರಮೇಶ್ ಭಾಗವಹಿಸಿದ್ದರು
ವರದಿ: ಶ್ರೀನಾಥ್ ಪಿ. ಜಿ. ಪಾವಗಡ
