ಗುಬ್ಬಿ : ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮವನ್ನು ಗುಬ್ಬಿ ತಾಲೂಕಿನ ಚೇಳೂರು ಹೋಬಳಿ ಗುಡ್ಡದಹಳ್ಳಿ ಗ್ರಾಮದ ಶ್ರೀ ರಂಗನಾಥ ಸ್ವಾಮಿ ದೇವಾಲಯದ ಆವರಣದಲ್ಲಿ ಫೆ.20ರ ಸೋಮವಾರದಂದು ಬೆಳಗ್ಗೆ 10ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ತಹಶಿಲ್ದಾರ್ ಬಿ ಆರತಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗುಬ್ಬಿ ತಾಲೂಕಿನ ಚೇಳೂರು ಹೋಬಳಿ ಗುಡ್ಡದಹಳ್ಳಿ ಗ್ರಾಮದ ಶ್ರೀ ರಂಗನಾಥ ಸ್ವಾಮಿ ದೇವಾಲಯದ ಆವರಣದಲ್ಲಿ ಫೆ.20ರ ಸೋಮವಾರದಂದು ಬೆಳಗ್ಗೆ 10ಗಂಟೆಗೆ ಗ್ರಾಮ ವಾಸ್ತವ್ಯವನ್ನು ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಚೇಳೂರು ಹೋಬಳಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಇಲಾಖೆಗಳ ಅಧಿಕಾರಿಗಳು /ನೌಕರರ ಸಮಕ್ಷಮದಲ್ಲಿ ಹಮ್ಮಿಕೊಳ್ಳಲಾಗಿದ್ದು, ಈ ಗ್ರಾಮ ವಾಸ್ತವ್ಯಕ್ಕೆ ರೈತರು ಆಗಮಿಸಿ ತಮ್ಮ ಅಹವಾಲನ್ನು ನೀಡುವಂತೆ ಮನವಿ ಮಾಡಿದ್ದು, ಈ ಕಾರ್ಯಕ್ರಮದಲ್ಲಿ ಎಲ್ಲಾ ಇಲಾಖೆಗಳ ಮುಖ್ಯಸ್ಥರು ಹಾಗೂ ಅಧಿಕಾರಿಗಳ ಸಮಕ್ಷಮದಲ್ಲಿ ಈ ಗ್ರಾಮ ವಾಸ್ತವ್ಯ ನಡೆಯಲಿದೆ ಎಂದು ತಿಳಿಸಿದರು.
ಈ ಗ್ರಾಮ ವಾಸ್ತವ್ಯದಲ್ಲಿ ಕಂದಾಯ ಇತರೆ ಸಂಬಂಧಪಟ್ಟ ತಾಲೂಕು ಮಟ್ಟದ ಇಲಾಖೆಗಳ ಕೌಂಟರ್ ಗಳನ್ನು ತೆರೆದು ಸಾರ್ವಜನಿಕರ ಅರ್ಜಿಗಳನ್ನು ಸ್ವೀಕರಿಸಲಾಗುವುದು, ಹಾಗಾಗಿ ಸಾರ್ವಜನಿಕರು ಇದರ ಸದಾಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಸಾರ್ವಜನಿಕರಲ್ಲಿ ಹಾಗೂ ರೈತ ಬಾಂಧವರಲ್ಲಿ ಪತ್ರಿಕಾ ಪ್ರಟಣೆಯ ಮೂಲಕ ತಹಶೀಲ್ದಾರ್ ಬಿ. ಆರತಿ ಮನವಿ ಮಾಡಿದರು.
ವರದಿ : ಸಂಜಯ್ ಕೊಪ್ಪ ಗುಬ್ಬಿ
