ಶಿರಾ ಬಿಜೆಪಿ ಟಿಕೆಟ್‌ನ ಪ್ರಬಲ ಆಕಾಂಕ್ಷಿ: ಬಿ.ಕೆ.ಮಂಜುನಾಥ್.

ಶಿರಾ: ‘ಮುಂದಿನ ವಿಧಾನಸಭಾ ಚುನಾವಣೆಗೆ ಶಿರಾ ಕ್ಷೇತ್ರದ ಬಿಜೆಪಿ ಟಿಕೆಟ್‌ನ ಪ್ರಬಲ ಆಕಾಂಕ್ಷಿಯಾಗಿದ್ದೇನೆ’ ಎಂದು ಮಧುಗಿರಿ ಬಿಜೆಪಿ ಜಿಲ್ಲಾ ಘಟಕದ ಅದ್ಯಕ್ಷ ಬಿ.ಕೆ.ಮಂಜುನಾಥ್ ತಿಳಿಸಿದರು.



ಅವರು ನಗರದಲ್ಲಿ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಅವರು, ‘ಬಿಜೆಪಿಯ ಸಾಮಾನ್ಯ ಕಾರ್ಯಕರ್ತ ನಾಗಿ ಈ ಹಿಂದೆ ಪಕ್ಷ ನೀಡಿದ ಎಲ್ಲ ಜವಾಬ್ದಾರಿಯನ್ನು ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ನಿರ್ವಹಿಸಲಾಗಿದೆ. 2007 ರಿಂದ ಕಾರ್ಯನಿರ್ವಹಿಸಿ ಎರಡು ಬಾರಿ ಪರಾಭವನಾಗಿ ಕಳೆದ ಉಪಚುನಾವಣೆಯಲ್ಲಿ ಟಿಕೆಟ್ ತ್ಯಾಗ ಮಾಡಿದ್ದು ಈ ಬಾರಿ‌ ಸ್ಪರ್ಧೆಗೆ ಸಿದ್ಧನಿದ್ದೇನೆ. ಪಕ್ಷ ಮಧುಗಿರಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನ ನೀಡಿ ಅದನ್ನು ನಾನು ಜವಾಬ್ದಾರಿ ಯಿಂದ  ನಿರ್ವಹಣೆ ಮಾಡಿದ್ದು  ಪ್ರಬಲ ಆಕಾಂಕ್ಷಿಯಾಗಿದ್ದೇನೆ ಎಂದರು.

ಬಿಜೆಪಿ ಘಟಕದ ವಿವಿಧ ಮುಖಂಡರನ್ನು ಭೇಟಿ ಮಾಡಿ ಈ ಚುನಾವಣೆಯಲ್ಲಿ ಟಿಕೆಟ್‌ ನೀಡಿ ಬಿಜೆಪಿ ಅಭ್ಯರ್ಥಿಯನ್ನು ಮಾಡಬೇಕೆಂದು ಮನವಿ ಮಾಡಿದ್ದೇವೆ. ಎಂದು ವಿವರಿಸಿದರು


ವರದಿ : ಶಿರಾ ಶ್ರೀಮಂತ್.

ಕಾಮೆಂಟ್‌‌ ಪೋಸ್ಟ್‌ ಮಾಡಿ

Please Select Embedded Mode To Show The Comment System.*

ನವೀನ ಹಳೆಯದು