ಶಿರಾ: 2023ರ ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿಯಾಗುವ ಮುನ್ನ ರಾಜಕೀಯ ಪಕ್ಷಗಳು ಮತಬೇಟೆ ಆರಂಭಿಸಿವೆ.
ಬಿಜೆಪಿಯು ಬಿಜೆಪಿ ವಿವಿಧ ಮೋರ್ಚಾಗಳ ಸಮಾವೇಶ ಆರಂಬಿಸಿದ್ರೇ, ಇತ್ತಾ ಕೈ ಪಕ್ಷದ ನಾಯಕರು ಮನೆ ಮನೆಗೆ ತೆರಳಿ ಕಾಂಗ್ರೆಸ್ ಪಕ್ಷದ ಮಹಾತ್ವಾಕಾಂಕ್ಷಿ ಯೋಜನೆಗಳಾದ ಕಾರ್ಡ್ ವಿತರಣೆ ಅಭಿಯಾನದಲ್ಲಿ ಭಾಗವಹಿಸಿ ಮನೆ ಮನೆಗೆ ತೆರಳಿ ಮಹಿಳೆಯರಿಗೆ ಗ್ಯಾರಂಟಿ ಕಾರ್ಡ್ ವಿತರಣೆ ಮಾಡಿದೆ.
ಮತಬೇಟೆಯಾಡ್ತಿದ್ದಾರೆ.
ಸತತ ಹಲವಾರು ದಿನಗಳ ಕಾಲ ತಾಲ್ಲೂಕಿನಲ್ಲಿ ಸುತ್ತು ಹಾಕಿದ ಮಾಜಿ ಸಚಿವ ಟಿ.ಬಿ.ಜಯಚಂದ್ರ ತಮ್ಮ ಮತ ಕ್ಷೇತ್ರಗಳಲ್ಲಿ ತಮ್ಮ
ಮತದಾರರನ್ನು ಸೆಳೆದರು. ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಗ್ಯಾರೆಂಟಿ ಕಾರ್ಡ್ಗಳನ್ನು ಮನೆಮನೆಗೆ ಭೇಟಿ ನೀಡಿ ವಿತರಿಸಿದರು.
ಶಿರಾ ಕ್ಷೇತ್ರದಲ್ಲಿ ಕಾಂಗ್ರೆಸ್ ವಶಕ್ಕೆ ತೆಗೆದುಕೊಂಡಿತು ಅದೇರೀತಿ ರಾಜ್ಯದಲ್ಲಿ
ಅಧಿಕಾರ ಹಿಡಿಯಲೇಬೇಕೆಂದು ಪಟ್ಟು ಹಿಡಿದಿರುವ ಕೈ ನಾಯಕರು ಕಾಲಿಗೆ ಚಕ್ರ ಕಟ್ಟಿಕೊಂಡು ವಿವಿಧ ಮತ ಕ್ಷೇತ್ರಗಳಿಗೆ ತೆರಳಿ ತಮ್ಮ ಸರ್ಕಾರಗಳ ಯೋಜನೆಗಳನ್ನು ಮುಂದಿಟ್ಟುಕೊಂಡು ಮತದಾರರನ್ನು ಸೇಳೆಯುತ್ತಿದ್ದಾರೆ.
ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಜನರ ಮುಂದಿಟ್ಟು ಕಾಂಗ್ರೆಸ್ಗೆ ಮತಗಳನ್ನು ನೀಡುವಂತೆ ಸಂದೇಶ ರವಾನೆ ಮಾಡಿದರು.
ಇನ್ನು ಇಂದು ಕೂಡ ತಮ್ಮ ಕಾರ್ಯಕರ್ತರ ದಂಡು ಕಟ್ಟಿಕೊಂಡ ಟಿ.ಬಿ.ಜೆ ಯವರು
ಶಿರಾ ತಾಲ್ಲೂಕಿನ ಮೇಕೆರಹಳ್ಳಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ
ಮನೆ ಮನೆಗಳಿಗೆ ಭೇಟಿ ನೀಡಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಘೋಷಣೆ ಮಾಡಿರುವ ಯೋಜನೆಗಳನ್ನು ಜಾರಿಗೆ ತರಲಾಗುವುದು ಎಂದು ಮತದಾರರಿಗೆ ಮನವರಿಕೆ ಮಾಡಿದರು.
ಇನ್ನು ಗೃಹಲಕ್ಷ್ಮಿ ಯೋಜನೆ ಹೆಸರಿನಲ್ಲಿ ಮಹಿಳೆಯರಿಗೆ ಪ್ರತಿ ತಿಂಗಳು 2000, ಗೃಹ ಜ್ಯೋತಿ ಯೋಜನೆಯಡಿಯಲ್ಲಿ 200 ಯೂನಿಟ್ ಉಚಿತ ವಿದ್ಯುತ್, ಬಿಪಿಎಲ್ ಕಾರ್ಡ್ದಾರರಿಗೆ 10 ಕೆಜಿ ಅಕ್ಕಿ ಉಚಿತವಾಗಿ ನೀಡುವ ಗ್ಯಾರೆಂಟಿ ಕಾರ್ಡ್ ಅನ್ನು ಸ ಮನೆ ಮನೆಗೆ ಭೇಟಿ ನೀಡಿ ಹಂಚಿದರು. ಈ ವೇಳೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವಂತೆ ಮನವಿ ಮಾಡಿದರು. ಈ ವೇಳೆ ಮಾತನಾಡಿದ ಅವರು ನಾವು ನುಡಿದಂತೆ ನಡೆದಿದ್ದೇವೆ. ಬಿಜೆಪಿಯವರಂತೆ ಸುಳ್ಳು ಭರವಸೆಗಳನ್ನು ನೀಡುವುದಿಲ್ಲ ಎಂದರು.
ಕಾರ್ಡ್ ಹಂಚುವ ಜೊತೆಯಲ್ಲಿ ಅಲ್ಲಿನ ಬಡ ಮಹಿಳೆಯರ ಸಮಸ್ಯೆಗಳನ್ನು ಕೂಡ ಆಲಿಸಿ ಸಮಸ್ಯೆಗಳನ್ನು ಬಗೆಹರಿಸುತ್ತೇವೆ ಎಂದು ಆಶ್ವಾಸನೆ ನೀಡಿದರು.
ಇದೆ ವೇಳೆ ಕಾಂಗ್ರೆಸ್ ಪಕ್ಷದ ಹಲವಾರು ಮುಖಂಡರು ಹಾಜರಿದ್ದರು...
ವರದಿ ಶ್ರೀಮಂತ್ ಶಿರಾ