ಜನರ ಸಮಸ್ಯೆಗಳತ್ತ ಚಿತ್ತ; ಟಿಬಿಜೆ ಸಂಘಟನಾ ಮಂತ್ರ

ಕಾರ್ಯಕರ್ತರ ಜನರ ಸಮಸ್ಯೆ ಆಲಿಸಿದ ಮಾಜಿ ಸಚಿವ ಟಿ.ಬಿ.ಜಯಚಂದ್ರ. 



ಶಿರಾ ಕ್ಷೇತ್ರದಲ್ಲಿ ಜನರ ಸಮಸ್ಯೆಗಳು, ಅವರ ಅಭಿಪ್ರಾಯ ಏನು ಎಂಬುದು ತಿಳಿದು, ನಂತರ ಅದಕ್ಕನುಗುಣವಾಗಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತೇವೆ’ ಎಂದು ಮಾಜಿ ಸಚಿವ ಟಿ.ಬಿ.ಜಯಚಂದ್ರ ಅವರು ತಿಳಿಸಿದ್ದಾರೆ.

ತಾಲ್ಲೂಕಿನ ವಿವಿಧ ಗ್ರಾಮಗಳ ಮನೆಮನೆಗೂ ಭೇಟಿ ನೀಡಿ ಜನರ ಸಮಸ್ಯೆ ಆಲಿಸಿದ್ದಾರೆ.

ತಾಲ್ಲೂಕಿನ ಮಾಗೋಡು ಗ್ರಾಮದಲ್ಲಿ ಭೇಟಿ ನೀಡಿ ಜನರ ಸಮಸ್ಯೆ ಅಲಿಸುವ ಸಂದರ್ಭದಲ್ಲಿ ಅಂಗವಿಕಲ ತನ್ನ ಬದುಕು ಕಟ್ಟಿಕೊಂಡ ಪೆಟ್ಟಿಗೆ ಅಂಗಡಿ ನೆಡೆಸುವ ಮಾಗೋಡು ಕಂಬಣ್ಣನ ಅಂಗಡಿ ಹತ್ತಿರ ಕುಳಿತು ಸಮಸ್ಯೆ ಆಲಿಸಿದ ನಂತರ ಮಾತನಾಡಿದ ಅವರು, ಸದ್ಯದ ಪರಿಸ್ಥಿತಿಯಲ್ಲಿ ಕ್ಷೇತ್ರದ ಸಮಸ್ಯೆಗಳೇನು? ಹಾಗೂ ಗ್ರಾಮೀಣ ಮಟ್ಟದಲ್ಲಿ ಏನೇನು ಸಮಸ್ಯೆಗಳಿವೆ? ಜನರ ಧ್ವನಿ ಹಾಗೂ ಅಭಿಪ್ರಾಯ ಏನು ಎಂಬುದನ್ನು ತಿಳಿಯಲು ಗ್ರಾಮೀಣ ವಿವಿಧ ಘಟಕಗಳ ಅಧ್ಯಕ್ಷರುಗಳನ್ನು ಕರೆದು ಚರ್ಚೆ ಮಾಡುತ್ತಿದ್ದೇವೆ. ಅವರ ಅಭಿಪ್ರಾಯಗಳನ್ನು ಆಲಿಸಿದ ನಂತರ, ಪ್ರತ್ಯೇಕ ಹೋರಾಟ ನಡೆಸುತ್ತೇವೆ. 

ಪ್ರತಿ ಗ್ರಾಮದಲ್ಲಿಯೊ ಅನೇಕ ಸಮಸ್ಯೆಗಳಿವೆ. ಜತೆಗೆ ಕೊರೋನಾ ಸಂದರ್ಭದಲ್ಲಿ ಆಡಳಿತ ವೈಫಲ್ಯದಿಂದ ಜನ ಸಾಕಷ್ಟು ನೊಂದಿದ್ದಾರೆ.

 ರೈತರು, ಕಾರ್ಮಿಕರಿಗೆ ಬಹಳ ತೊಂದರೆಯಾಗಿದೆ. ಪ್ರತಿಯೊಂದು ಬೀದಿಯಲ್ಲಿ. ಜನರ ಸಮಸ್ಯೆ ಆಲಿಸಲು ತೆರಳ ಬೇಕಾಗಿದೆ. 

ಇದೆಲ್ಲದರ ಬಗ್ಗೆ ನಮ್ಮ ಕಾರ್ಯಕರ್ತರು

 ರಾಯಭಾರಿಗಳಾಗಿ ನಮಗೆ ಮಾಹಿತಿ ನೀಡಲಿದ್ದಾರೆ ಎಂದವರು ಹೇಳಿದ್ದಾರೆ.

ಚುನಾವಣೆ ಇರಲಿ, ಇಲ್ಲದಿರಲಿ ನಮ್ಮ ಕಾರ್ಯಕರ್ತರು ನಿರಂತರ ಹೋರಾಟ ಮುಂದುವರೆಸಲಿದ್ದಾರೆ. ‘ಕಾಂಗ್ರೆಸ್ ಪಕ್ಷ ತನ್ನ ಕಾಲ ಮೇಲೆ ನಿಂತು ಹೋರಾಟ ಮಾಡಿ ಚುನಾವಣೆ ಗೆಲ್ಲಲು ಬೇಕಾದ ಕಾರ್ಯಕ್ರಮಗಳನ್ನಷ್ಟೇ ರೂಪಿಸುತ್ತಿದ್ದೇವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಗುಳುಗೇನಹಳ್ಳಿ ನಾಗರಾಜು,

ಶ್ರೀರಂಗಪ್ಪ.ದೊಡ್ಡಗೂಳರಾಮಚಂದ್ರಪ್ಪ.ಸೇರಿದಂತೆ

 ಗ್ರಾಮದ ಮುಖಂಡರು ಹಾಜರಿದ್ದರು.


ವರದಿ ಶಿರಾ ಶ್ರೀಮಂತ್.

ಕಾಮೆಂಟ್‌‌ ಪೋಸ್ಟ್‌ ಮಾಡಿ

Please Select Embedded Mode To Show The Comment System.*

ನವೀನ ಹಳೆಯದು