ಶಿರಾ: ತಾಲ್ಲೂಕಿನ ತಾಳಗುಂದ ಗ್ರಾಮದಿಂದ ಶಿರಾಕಡೆ ಬರುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ಬಿದ್ದಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.
ಬಸ್ಸಿನಲ್ಲಿ ಅಧಿಕ ಸಂಖ್ಯೆಯಲ್ಲಿ ಶಾಲಾ ವಿದ್ಯಾರ್ಥಿಗಳಿದ್ದರು. ಸಣ್ಣಪುಟ್ಟ ಗಾಯವಾಗಿದೆ ಎಂದು ತಿಳಿದುಬರುತ್ತದೆ.
ಬಸ್ ಓಡಿಸುತ್ತಿರುವಾಗ ಚಾಲಕನ ನಿಯಂತ್ರಣದ ಬಸ್ ರಸ್ತೆಯ ಪಕ್ಕಕ್ಕೆ ಬಿದ್ದು
ಎಷ್ಟೇ ಪ್ರಯತ್ನ ಮಾಡಿದರೂ ನಿಯಂತ್ರಣಕ್ಕೆ ಬರಲಿಲ್ಲ ರಸ್ತೆಯ ಬದಿಯಲ್ಲಿ ಉರುಳಿದ್ದು ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಸಣ್ಣಪುಟ್ಟ ಗಾಯಗಳು ಆಗಿರುತ್ತದೆ
ಬಸ್ ರಸ್ತೆ ಉರುಳಿದೆ ಎಂಬ ಎನ್ನುವ ಸುದ್ದಿ ತಿಳಿಯುತ್ತಿದ್ದಂತೆ ವಿದ್ಯಾರ್ಥಿಗಳ ಪೋಷಕರು, ಕುಟುಂಬದವರು ತೀವ್ರ ಆತಂಕಕ್ಕೊಳಗಾಗಿ ಘಟನಾ ಸ್ಥಳಕ್ಕೆ ದೌಡಾಯಿಸಿ ಮಕ್ಕಳ ಸುರಕ್ಷತೆ ಬಗ್ಗೆ ವಿಚಾರಿಸಿದರು.
ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎಂದು ಆಕ್ರೋಶ ವ್ಯಕ್ತ ಮಾಡಿದ್ದಾರೆ.
ಘಟನೆಯಲ್ಲಿ ತೀವ್ರ ವಾಗಿ ನಾಗಮ್ಮ(46),ಸಿದ್ದಗಂಗಾಪ್ಪ
(62)
.ಹೊನ್ನಪ್ಪ (50) ಸ್ವಲ್ಪ ಹಚ್ಚಿ ಗಾಯ ವಾಗಿರುತ್ತದೆ
ಬಸ್ ನಲ್ಲಿ ಸುಮಾರು 25 ರಿಂದ 30 ಜನ ಪ್ರಯಾಣ ಬೆಳೆಸಿದರು ಎಂದು ತಿಳಿದುಬರುತ್ತದೆ.
ಕಳ್ಳಂಬೆಳ್ಳ ಪೋಲೀಸರು
ಸ್ಥಳಕ್ಕೆ ತೆರಳಿ ಪರಿಶೀಲಿಸಿ ಮಾಹಿತಿ ಪಡೆದುಕೊಂಡರು.
ಬಸ್ ಅಪಘಾತಕ್ಕಿಡಾದ ಹಿನ್ನೆಲೆಯಲ್ಲಿ ಗಾಯಾಳುಗಳು ಶಿರಾ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಮಾಜಿ ಸಚಿವರಾದ ಟಿ.ಬಿ.ಜಯಚಂದ್ರರವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿ ಆತ್ಮಸ್ಥೈರ್ಯ ತುಂಬಿದರು.ಈ ಸಂದರ್ಭದಲ್ಲಿ ಗುಳಿಗೇನಹಳ್ಳಿ ನಾಗರಾಜ್, ತುಮುಲ್ ನಿರ್ದೇಶಕರಾದ ಎಸ್.ಆರ್.ಗೌಡ, ಆರೋಗ್ಯಾಧಿಕಾರಿ ಶ್ರೀನಾಥ್, ಧರ್ಮೇಂದ್ರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ವರದಿ ಶಿರಾ ಶ್ರೀಮಂತ್.