ರೈತರ ವಿವಿಧ ಬಗೆಯ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಸೋಮವಾರ ಪೂಜಾರಪ್ಪ ನೇತೃತ್ವದ ಕರ್ನಾಟಕ ರಾಜ್ಯ ರೈತ ಸಂಘ , ಪಾವಗಡ ಘಟಕದ ವತಿಯಿಂದ ಪ್ರತಿಭಟನೆ.

 ಪಾವಗಡ: ತಾಲ್ಲೂಕಿನಲ್ಲಿರುವ ರೈತರ ವಿವಿಧ ಬಗೆಯ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಸೋಮವಾರ ಪೂಜಾರಪ್ಪ ನೇತೃತ್ವದ ಕರ್ನಾಟಕ ರಾಜ್ಯ ರೈತ ಸಂಘ , ಪಾವಗಡ ಘಟಕದ ವತಿಯಿಂದ ಪ್ರತಿಭಟನೆ ನಡೆಸಿದರು.


 

ಟೋಲ್ ಬಳಿಯ ಅಂಬೇಡ್ಕರ್ ವೃತ್ತದಿಂದ ಶನಿಮಹಾತ್ಮ ವೃತ್ತದವರೆಗೂ ಮೆರವಣಿಗೆ ಮೂಲಕ ವ್ಯವಸ್ಥೆ ಯ ವಿರುದ್ದ ಪ್ರತಿಭಟನಾ ನಿರತರು ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು 

ಈ ಸಂಬಂದ ರಾಜ್ಯ ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಪೂಜಾರಪ್ಪ ಮಾತನಾಡಿ ಅರಣ್ಯ ಇಲಾಖೆಯವರು ರೈತರಿಗೆ ಅನ್ಯಾಯ ಮಾಡುತ್ತಿದ್ದಾರೆ, ಬೆಸ್ಕಾಂ ಇಲಾಖೆಯವರು ಟಿ. ಸಿ. ನೀಡುವಲ್ಲಿ ವಿಳಂಬ ಮಾಡುತ್ತಿದ್ದಾರೆ, ಎಸ್. ಬಿ. ಐ ಬ್ಯಾಂಕ್ ಸಿಬ್ಬಂದಿ ರೈತರಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ, ಬೆಳೆವಿಮೆ ರೈತರಿಗೆ ಸಿಕ್ಕಿಲ್ಲ, ಹೂವಿನ ಮಂಡಿಗಳಲ್ಲಿ ರೈತರಿಗೆ ಮೋಸವಾಗುತ್ತಿದೆ ಈ ಎಲ್ಲ ಸಮಸ್ಯೆಗಳನ್ನು ಸರ್ಕಾರದ ಮಟ್ಟದ ಅಧಿಕಾರಿಗಳು ಬಗೆ ಹರಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದರು 

ಕರ್ನಾಟಕ ರಾಜ್ಯ ರೈತ ಸಂಘದ ಮಹಿಳಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾವೇರಿಯ ಮಂಜುಳಾ ಹಕ್ಕಿ ಪ್ರತಿಭಟನೆ ಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಎಲ್ಲ ಸರ್ಕಾರಗಳು ರೈತರನ್ನು ನಿರ್ಲಕ್ಷ್ಯ ಮಾಡುತ್ತಿವೆ, ರೈತ ಪರ ಎಂದು ಹೇಳಿ ವೊಟು ಪಡೆದು ರೈತರಿಗೆ ಉಂಡೆನಾಮ ಇಡುತ್ತಿವೆ , ರೈತರ ಪರ ಕಾಳಜಿ ವಹಿಸುವ ಯಾವುದೇ ರಾಜಕಾರಣಿಯನ್ನು ಇದುವರೆವಿಗೂ ನೋಡಿಲ್ಲ , ನೀವು ಇದೇ ರೀತಿ ರೈತರನ್ನು ನಿರ್ಲಕ್ಷ್ಯ ಮಾಡಿದರೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಾಗುತ್ತದೆ ಎಂದರು 

ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಮುಂಬರುವ ಚುನಾವಣೆಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸುವೀರಾ ? ಎಂಬ ಪರ್ತಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ಹೌದು ಹೀಗಾಗಲೇ ಕೆಲ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ನಿಲ್ಲಿಸಲು ಚರ್ಚೆ ನಡೆದಿದೆ ಎಂದು ತಿಳಿಸಿದರು 

ಪ್ರತಿಭಟನೆಯಲ್ಲಿ ರಾಜ್ಯ ಮಟ್ಟದ ಹೋರಾಟಗಾರರಾದ ಈಚಲಗೆರೆ ರವಿಶಂಕರಪ್ಪ , ಸಂಘಟನಾ ಕಾರ್ಯದರ್ಶಿ ದೊಡ್ಡ ಮಾಳಯ್ಯ, ಜಿಲ್ಲಾ ಕಾರ್ಯದರ್ಶಿ ಶಂಕರಪ್ಪ, ಮಧುಗಿರಿ ಮೂರ್ತಿ, ಕೊರಟಗೆರೆ ಸಭೀರ್ , ಸಮಾಜ ಸೇವಕ ನೇರಳೆ ಕುಂಟೆ ನಾಗೇಂದ್ರ ಹಾಗೂ ತಾಲ್ಲೂಕು ಘಟಕದ ಎಲ್ಲ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು 


ವರದಿ: ಶ್ರೀನಾಥ್ ಪಿ. ಜಿ. , ಪಾವಗಡ

ಕಾಮೆಂಟ್‌‌ ಪೋಸ್ಟ್‌ ಮಾಡಿ

Please Select Embedded Mode To Show The Comment System.*

ನವೀನ ಹಳೆಯದು