ಶಿರಾ:-ತಾಲ್ಲೂಕಿನ ತಾವರೆ ಕೆರೆ ಗ್ರಾಮದಲ್ಲಿ ಶ್ರೀ ಗಣಪತಿ ಕಲ್ಯಾಣ ಮಂಟಪದಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ, ಸ್ಥಳಿಯ ಗ್ರಾಮ ಪಂಚಾಯಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ
ಸಂಯುಕ್ತ ಆಶ್ರಯದಲ್ಲಿ ನಡೆದ “ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆ”ಯ ಪ್ರಯುಕ್ತ ನಡೆದ ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಿರಾ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶೆ ಶ್ರೀಮತಿ ಲಕ್ಷ್ಮೀ ಎಮ್.ವಿ. ಸಂವಿಧಾನ ಪುರುಷ ಹಾಗೂ ಮಹಿಳೆಯರಿಗೆ ಸಮಾನ ಸ್ಥಾನಮಾನ ನೀಡಿದೆ. ಆದರೆ ಪುರಷ ಪ್ರಧಾನ ಸಮಾಜದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ನಿಂತಿಲ್ಲ. ಇದಕ್ಕೆ ಹೆಣ್ಣು ಮಕ್ಕಳಲ್ಲಿ ಶಿಕ್ಷಣದ ಕೊರತೆ ಕಾರಣವಾಗಿದೆ ತಮ್ಮ ಭ್ರೂಣ ಹತ್ಯೆ ನಿಲ್ಲಬೇಕು ಎಂದು ಹೇಳಿದರು.
ಕಾನೂನಿನ ವಿವೇಚನೆ ಇಲ್ಲದೆ ಆಗುವ ಅನಾಹುತ ತಡೆಗಟ್ಟಲು ಮತ್ತು ಶೋಷಣೆಯಿಂದ ಮುಕ್ತರಾಗಲು ಮಹಿಳೆಯರು ಕಾನೂನಿನ ಅರಿವು ಪಡೆಯಬೇಕು ತಮ ಎಂದು ತಿಳಿಸಿದ ಅವರು
ಮಕ್ಕಳು ಮತ್ತು ಮಹಿಳೆಯರ ಮೇಲೆ ದೌರ್ಜನ್ಯ ನಡೆದರೆ ಧೈರ್ಯವಾಗಿ ಮುಂದೆ ಬಂದು ಕಾನೂನಿನ ನೆರವು ಪಡೆದುಕೊಳ್ಳಬೇಕು. ಮಕ್ಕಳಿಗೆ ಮತ್ತು ಮಹಿಳೆಯರ ರಕ್ಷಣೆಗಾಗಿ ಹಲವಾರು ಕಾನೂನುಗಳನ್ನು ಜಾರಿಗೆ ತರಲಾಗಿದೆ. ಇದರ ಬಗ್ಗೆ ತಿಳಿದುಕೊಂಡರೆ ಮುಂದೆ ಯಾರಿಗಾದರೂ ಅನ್ಯಾಯವಾದಾಗ ಅವರಿಗೆ ನೀವು ಸಹಾಯ ಮಾಡಬಹುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಿರಾ ಸಾರ್ವಜನಿಕ ಆರೋಗ್ಯ ಕೇಂದ್ರದ ಸ್ತ್ರೀರೋಗ ತಜ್ಞ ಡಾ.ಡಿ.ಎಂ ಗೌಡ ಮಾತನಾಡಿ
ಮಹಿಳೆಯರು ತಮ್ಮ ಕುಟುಂಬ ನಿರ್ವಹಣೆ, ಮನೆಯವರ ಆರೋಗ್ಯಕ್ಕೆ ನೀಡುವಷ್ಟೇ ಕಾಳಜಿಯನ್ನು ಅವರ ಆರೋಗ್ಯದ ಕಡೆಗೂ ನೀಡಬೇಕು ..
ಕಾರ್ಯಕ್ರಮದಲ್ಲಿ ತಾಲ್ಲೂಕು ವಕೀಲರ ಸಂಘದ ಅದ್ಯಕ್ಷ ಧರಣಿ ಕುಮಾರ್ ಕಾರ್ಯದರ್ಶಿ ಗುರು ಮೂರ್ತಿ ತಾವರೆಕೆರೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾಗರಾಜ್ ಗ್ರಾಮ ಪಂಚಾಯತ್ ಸದಸ್ಯ ಶಿವು ನಾಯಕ್ ಗ್ರಾ.ಪಂ ಸಿಬ್ಬಂದಿ ಸೇರಿದಂತೆ ಆಶಾ ಹಾಗು ಶಾಲಾ ಶಿಕ್ಷಕರ ಹಾಜರಿದ್ದರು
ಈ ಸಂದರ್ಭದಲ್ಲಿ ಹಲವಾರು ಮಹಿಳೆಯರನ್ನು ಗೌರವಿಸಲಾಯಿತು. ಗರ್ಭಿಣಿಯರಿಗೆ ಸೀಮಂತ ಕಾರ್ಯ ನೆರವೇರಿಸಲಾಯಿತು.