ಚಿಕ್ಕನಾಯಕನಹಳ್ಳಿ: ಲೂಟಿಕೋರ ಬಿಜೆಪಿ ಸರ್ಕಾರವನ್ನು ಮುಂಬರುವ ಚುನಾವಣೆಯಲ್ಲಿ ಅಧಿಕಾರದಿಂದ ಕಿತ್ತೊಗೆಯಬೇಕು,ಹಾಗೂ ಎರಡು ರಾಷ್ಟ್ರೀಯ ಪಕ್ಷಗಳನ್ನು ಕಿತ್ತೊಗೆದು ಕನ್ನಡ ನಾಡಿನ ಜೆಡಿಎಸ್ ಪಕ್ಷಕ್ಕೆ ಬೆಂಬಲ ನೀಡುವಂತೆ ರಾಜ್ಯ ಯುವ ಜೆಡಿಎಸ್ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮನವಿ ಮಾಡಿದರು.
ತಾಲ್ಲೂಕಿನ ಹಂದನಕೆರೆ ಹೋಬಳಿಯ ಹುಲ್ಕಲ್ ದುರ್ಗಮ್ಮ ದೇವಾಲಯ ಆವರಣದಲ್ಲಿ ಆಯೋಜಿಸಿದ್ದ ಭಗೀರಥ ಸಮಾಜ ಹಾಗೂ ಯುವ ಜನತಾದಳದ ಬೃಹತ್ ಸಮಾವೇಶದಲ್ಲಿ ಮಾತನಾಡಿದರು.
ಬಿಜೆಪಿ ಆಡಳಿತಕ್ಕೆ ಬಂದ ಮೇಲೆ ಆಡಳಿತದಲ್ಲಿ ಶೇ. 40 ರಷ್ಟು ಕಮಿಷನ್ ಪಡೆದು ರಾಜ್ಯವನ್ನು ಲೂಟಿ ಮಾಡುತ್ತಿದ್ದಾರೆ, ರಾಜ್ಯವಾಳಿದ ಎರಡು ರಾಷ್ಟ್ರೀಯ ಪಕ್ಷಗಳು ಯುವಕರಿಗೆ ಉದ್ಯೋಗ ನೀಡಲು ವಿಫಲವಾಗಿವೆ.
ಬಿಜೆಪಿ ಸರ್ಕಾರ ರಾಜ್ಯದ ಮಹಿಳೆಯರ, ಅನ್ನದಾತರ ಕಣ್ಣಲ್ಲಿ ನೀರು ತರಿಸುತ್ತಿದ್ದಾರೆ,ಬಡವರಿಗೆ ಮನೆಗಳನ್ನು ಕೊಟ್ಟಿಲ್ಲ, ದುಡಿವ ಕೈಗಳಿಗೆ ಕೆಲಸ ಕೊಡುವಲ್ಲಿ ವಿಫಲವಾಗಿದೆ. ಉದ್ಯೋಗ ಸೃಜನೆ ಕಡೆಗೆ ಗಮನ ಕೊಟ್ಟಿಲ್ಲ. ಅಭಿವೃದ್ಧಿ ಹೆಸರಿನಲ್ಲಿ ಲೂಟಿ ಹೊಡೆಯುವುದೇ ಇವರ ಕೆಲಸವಾಗಿದೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ರಾಜ್ಯಾದ್ಯಂತ ಒಬ್ಬರೇ ಕಾಲಿಗೆ ಚಕ್ರ ಕಟ್ಟಿಕೊಂಡು ಓಡಾಡುತ್ತಿದ್ದಾರೆ, ಪಂಚರತ್ನ ಯಾತ್ರೆ ಯೋಜನೆಯನ್ನು ಜಾರಿಗೆ ತರಲು ಶ್ರಮಿಸುತ್ತಿದ್ದಾರೆ. ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗ ರೈತರ 26 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು.
ಜೆಡಿಎಸ್ ಪಕ್ಷ ಸೂರು ಇಲ್ಲದ ಬಡವರಿಗೆ ಮನೆಗಳನ್ನು ಹಾಗೂ ಪ್ರತಿ ತಾಲ್ಲೂಕಿಗೆ ಹೋಬಳಿ ಕೇಂದ್ರಗಳಲ್ಲಿ 30 ಬೆಡ್ ಆಸ್ಪತ್ರೆ ಹಾಗೂ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಲು ಹೆಚ್.ಡಿ.ಕುಮಾರಸ್ವಾಮಿಯವರನ್ನು ಬೆಂಬಲಿಸಲು ಜೆಡಿಎಸ್ ಕಾರ್ಯಕರ್ತರು ಮನೆ ಮನೆಗೆ ತೆರಳಿ ಪಂಚರತ್ನ ಯೋಜನೆಯ ಕರಪತ್ರಗಳನ್ನು ತಲುಪಿಸಿ ಸಿ.ಬಿ.ಸುರೇಶ್ ಬಾಬು ರವರ ಗೆಲುವಿಗೆ ಶ್ರಮಿಸಿದರೆ
ಬರುವ ಚುನಾವಣೆಯಲ್ಲಿ ಯಾರೂ ನಿರೀಕ್ಷಿಸಿರದ ರೀತಿಯಲ್ಲಿ ಜೆಡಿಎಸ್ಗೆ ಫಲಿತಾಂಶ ಬರಲಿದೆ. ಬದಲಾವಣೆ ಬಯಸಿರುವ ರಾಜ್ಯದ ಜನ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮೇಲೆ ವಿಶ್ವಾಸವಿಟ್ಟಿದ್ದು ಪ್ರಮುಖ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ.
ನಮ್ಮ ಪಕ್ಷದ ಜಲಧಾರೆ ಕಾರ್ಯಕ್ರಮ ಆ ಭರವಸೆ ಮೂಡಿಸಿದೆ ಎಂದು ಹೇಳಿದರು.
ರಾಜ್ಯದ ಜನ ಬಿಜೆಪಿ ಸರ್ಕಾರದ ಕಾರ್ಯವೈಖರಿ ಗಮನಿಸುತ್ತಿದ್ದು, ಈ ಬಾರಿ ಅಧಿಕಾರದಿಂದ ದೂರ ಇಡಬೇಕೇಂಬ ಕೂಗು ಕೇಳಿ ಬರುತ್ತಿದೆ. ಚಿಕ್ಕನಾಯಕನಹಳ್ಳಿ ಕ್ಷೇತ್ರದಲ್ಲೂ ಜನ ಬದಲಾವಣೆ ಬಯಸಿದ್ದಾರೆ ಎಂದರು.
ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ರೈತರ ಸಾಲ ಮನ್ನಾ ಮಾಡಿದ್ದರು. ಮುಂದೆ ಪಕ್ಷ ಅಧಿಕಾರಕ್ಕೆ ಬಂದರೆ ಸ್ತ್ರೀ ಶಕ್ತಿ ಸಂಘದ ಸದಸ್ಯೆಯರ ಸಾಲ ಮನ್ನಾ ಮಾಡಲು ಉದ್ದೇಶಿದ್ದಾರೆ.
ತುಮಕೂರು ಜಿಲ್ಲೆ ತೆಂಗು, ಅಡಿಕೆ ಬೆಳೆಗಾರರು ಹೆಚ್ಚಾಗಿದ್ದು ಕೊಬ್ಬರಿ ಬೆಲೆ 9ಸಾವಿರ ರೂ.ಗೆ ಇಳಿದಿರುವ ಕೊಬ್ಬರಿ ಬೆಲೆಯನ್ನು 15 ಸಾವಿರ ರೂ.ಗೆ ಹೆಚ್ಚಿಸುವಲ್ಲಿ ಜೆಡಿಎಸ್ ಸರ್ಕಾರಕ್ಕೆ ಅಧಿಕಾರಕ್ಕೆ ಬಂದರೆ ಕೊಬ್ಬರಿಗೆ 15 ಸಾವಿರ ರೂಪಾಯಿ ಬೆಂಬಲ ಬೆಲೆ ನೀಡುತ್ತೇವೆ ಎಂದರಲ್ಲದೆ, ಪ್ರಧಾನಮಂತ್ರಿಗಳು ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಠಿಸುತ್ತೇವೆ ಎಂದು ಯುವ ಜನತೆಗೆ ಆಶ್ವಾಸನೆ ನೀಡಿದ್ದರೂ ಇದುವರೆವಿಗೂ ಕಾರ್ಯರೂಪಕ್ಕೆ ಬಂದಿಲ್ಲ ಎಂದು ಆರೋಪಿಸಿದರು.
ಉದ್ದೇಶಹೊಂದಿದ್ದಾರೆ ಎಂದು ತಿಳಿಸಿದರು.
ಜನಸಾಮಾನ್ಯರ ಸಂಕಷ್ಟಗಳಿಗೆ ಸ್ಪಂದಿಸಿಬೇಕೆಂಬ ನಿಟ್ಟಿನಲ್ಲಿ ಜೆಡಿಎಸ್ ಪಂಚರತ್ನ ಯೋಜನೆಗಳನ್ನು ರೂಪಿಸಿದೆ.
ಜೆಡಿಎಸ್ ಅಧಿಕಾರಕ್ಕೆ ಬಂದರೆ ಉಪ್ಪಾರ ಸಮುದಾಯದ ಒಬ್ಬರಿಗೆ ನಿಗಮ/ಮಂಡಳಿಯಲ್ಲಿ ಸ್ಥಾನ ನೀಡಲಾಗುವುದು ಎಂದು ತಿಳಿಸಿದರು.
ಮಾಜಿ ಶಾಸಕ ಸಿ.ಬಿ. ಸುರೇಶ್ ಬಾಬು ಮಾತನಾಡಿ, ಜನತಾದಳಕ್ಕೆ ಈ ಚುನಾವಣೆ ಪ್ರತಿಷ್ಠೆಯಾಗಿದೆ. ಕಾರ್ಯಕರ್ತರು ಪ್ರತಿ ಮನೆಗೂ ತೆರಳಿ ಮತದಾರರ ಮನವೊಲಿಸಬೇಕು ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿದರು.
ಈಗ ಅಧಿಕಾರದಲ್ಲಿರುವವರುಅರೆ ಬರೆ ಕಾಮಗಾರಿಗಳ ಕಟ್ಟಡಗಳಿಗೆ ಉದ್ಘಾಟನೆ ಮಾಡುತ್ತಾ,ತಾಲೂಕಿಗೆ ನೀರು ತಂದಿದ್ದೇನೆ ಎಂದು ಹೇಳಿಕೊಂಡು ಕಮಿಷನ್ ಆಸೆಗೆ ಪೈಪ್ಲೈನ್ ಮಾಡಿಸುವುದನ್ನೇ ದೊಡ್ಡ ಕೆಲಸವೆಂದು ಹೇಳಿಕೊಂಡು ಪ್ರಚಾರ ಪಡೆಯುತ್ತಿದ್ದಾರೆ ಎಂದು ಟೀಕಿಸಿದರು.
ಮುಂದೆ ಜೆಡಿಎಸ್ ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ, ಸ್ತ್ರೀ ಶಕ್ತಿ ಸ್ವಸಹಾಯ ಸಂಘಗಳ ಸಾಲ ಮನ್ನಾ ಜೊತೆಗೆ ರೈತರ ಪ್ರತಿ ಎಕರೆಗೆ 10 ಸಾವಿರ ರೂಪಾಯಿ ಹಾಗೂ 65 ವರ್ಷ ಮೇಲ್ಪಟ್ಟವರಿಗೆ 5 ಸಾವಿರ ರೂಪಾಯಿ ಮಾಶಾಸನ ನೀಡುವುದಾಗಿ ಆಶ್ವಾಸನೆ ನೀಡಿದ್ದಾರೆ. ಪಂಚರತ್ನ ಯೋಜನೆ ಜಾರಿಗೆ ತರಲು ಕಾರ್ಯಕರ್ತರು ಮನೆ ಮನೆಗೆ ತೆರಳಿ ಇದರ ಬಗ್ಗೆ ಮತದಾರರಿಗೆ ಮನವೊಲಿಸುವಂತೆ ಸಲಹೆ ನೀಡಿ ಅವರನ್ನು ಮತ್ತೆ ಮುಖ್ಯಮಂತ್ರಿ ಮಾಡುವ ಸಂಕಲ್ಪದೊಂದಿಗೆ ಕಾರ್ಯಕರ್ತರು ಶ್ರಮಿಸಬೇಕು ಎಂದು ಹೇಳಿದರು.
ಇದೇ ವೇಳೆ ಅನೇಕ ಮುಖಂಡರು ಕಾಂಗ್ರೆಸ್, ಬಿಜೆಪಿ ತೊರೆದು ಯುವರಾಜ ನಟ ನಿಖಿಲ್ ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಪಕ್ಷ ಸೇರಿದರು.
ಉಪ್ಪಾರ ಸಮಾಜದ ರಾಜ್ಯ ಉಪಾಧ್ಯಕ್ಷ,ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕಲ್ಲೇಶ್ ಮಾತನಾಡಿ, ರಾಜ್ಯದಲ್ಲಿ 30 ಲಕ್ಷಕ್ಕೂ ಹೆಚ್ಚು ಉಪ್ಪಾರ ಜನಾಂಗವಿದ್ದು ತಾಲ್ಲೂಕಿನ ಉಪ್ಪಾರ ಜನಾಂಗ ಜೆಡಿಎಸ್ ಅಭ್ಯರ್ಥಿ ಸಿ.ಬಿ.ಸುರೇಶ್ ಬಾಬು ರವರನ್ನು ಬೆಂಬಲಿಸಿ ಅವರು ಎಲ್ಲಾ ಜನಾಂಗದವರನ್ನು ಒಗ್ಗೂಡಿಸಿಕೊಂಡು ಹೋಗುವ ಸ್ವಭಾವದವರಾಗಿದ್ದಾರೆ. ಸಚಿವರು ಸೋಲುವ ಭಯದಿಂದ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ಮಾಡುತ್ತಿದ್ದಾರೆ. ಹಿಂದುಳಿದ ಅಲ್ಪಸಂಖ್ಯಾತ ಎಸ್.ಸಿ ಮತ್ತು ಎಸ್.ಟಿ ಜನಾಂಗದವರು ಜೆಡಿಎಸ್ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಮನವಿ ಮಾಡಿದರು.
ತಾತಯ್ಯನ ದರ್ಗಾಕ್ಕೆ ಭೇಟಿ
ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಬೆಳಗ್ಗೆ ತಾತಯ್ಯನ ದರ್ಗಾಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ನಂತರ ಇತಿಹಾಸ ಪ್ರಸಿದ್ಧ ಬೇವಿನಹಳ್ಳಿ ಗೇಟ್ ಕರಿಯಮ್ಮ ದೇವಾಲಯ ಹಾಗೂ ಹುಲ್ಕಲ್ ದುರ್ಗಮ್ಮ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಈ ವೇಳೆ ಜೆಡಿಎಸ್ ತಾಲೂಕು ಅಧ್ಯಕ್ಷ ರಾಮಚಂದ್ರಯ್ಯ, ಜಿಪಂ ಮಾಜಿ ಸದಸ್ಯ ಜಯಪ್ರಕಾಶ್, ಎಚ್ಡಿಕೆ ಬ್ರಿಗೆಡ್ನ ಶ್ರೀ ಹರ್ಷ, ಯುವ ಜನತಾ ದಳ ತಾ ಅಧ್ಯಕ್ಷ ಮಲ್ಲಿಕಾರ್ಜುನ್ ರಾಮಪ್ಪನಹಟ್ಟಿ, ಪಿ ಎಲ್ ಡಿ ಬ್ಯಾಂಕ್ ಅಧ್ಯಕ್ಷ ಹೊನ್ನೇಬಾಗಿ ಶಶಿಧರ್, ಹನುಮಂತಯ್ಯ, ಎಂ.ಬಿ. ನಾಗರಾಜು, ದಬ್ಬಗುಂಟೆ ರವಿಕುಮಾರ್, ಪುರಸಭಾಧ್ಯಕ್ಷೆ ಪುಷ್ಪಾ ಹನುಮಂತರಾಜು ಇತರರಿದ್ದರು.
ವರದಿ ಚಿಕ್ಕನಾಯಕನಹಳ್ಳಿ ಚಂದ್ರು.