ಇಂದು ಅಗ್ನಿಬನ್ನಿರಾಯ ಜಯಂತಿಯನ್ನು ಗುಬ್ಬಿ ತಾಲೂಕು ಆಡಳಿತ ವತಿಯಿಂದ ತಾಲೂಕು ಕಚೇರಿಯ ಕಂದಾಯ ಭವನದಲ್ಲಿ ತಹಶೀಲ್ದಾರ್ ಬಿ ಆರತಿ ನೇತೃತ್ವದಲ್ಲಿ ಆಚರಣೆ ಮಾಡಲಾಯಿತು.
ತಹಶೀಲ್ದಾರ್ ಬಿ.ಆರತಿ ಮಾತನಾಡಿ ಸರ್ಕಾರವು ಮಹಾನ್ ಪುರುಷರ ಜಯಂತಿಯನ್ನು ಆಚರಿಸುತ್ತಾ ಬಂದಿದ್ದು, ಕೆಲವು ಸಮುದಾಯಗಳು ಆಸಕ್ತಿವಹಿಸಿ ಆಚರಣೆಗಳಲ್ಲಿ ಭಾಗಿಯಾಗುವುದು ಒಂದು ಕಡೆಯಾದರೆ ಮತ್ತೊಂದು ಕಡೆ ಸರ್ಕಾರದ ಕಾರ್ಯಕ್ರಮ ಅಧಿಕಾರಿಗಳು ಜಯಂತಿಯನ್ನು ಆಚರಿಸಿಕೊಳ್ಳುತ್ತಾರೆ ಎಂಬ ಮನೋಬಾವಕ್ಕೆ ಬಂದಿದ್ದು, ಪ್ರತಿಯೊಂದು ಸಮುದಾಯದ ಮಹಾನ್ ಪುರುಷರ ಆದರ್ಶವನ್ನು ತಿಳಿದುಕೊಳ್ಳುವ ಮೂಲಕ ಅವರು ಹಾಕಿಕೊಟ್ಟಿರುವ ದಾರಿಯಲ್ಲಿ ಹೋದಾಗ ಮಾತ್ರ ಅಂತಹ ಮಹಾನ್ ಪುರುಷರ ಜಯಂತಿ ಆಚರಣೆಗೆ ಬೆಲೆ ಸಿಕ್ಕಂತೆ ಆಗುತ್ತದೆ. ಅಗ್ನಿವಂಶದವರು ಭಾಗಶಃ ರೈತಾಪಿ ವರ್ಗದವರೇ ಆಗಿದ್ದು, ತಮ್ಮ ಮಕ್ಕಳ ವಿದ್ಯಾಭ್ಯಾಸದ ಕಡೆ ಹೆಚ್ಚು ಗಮನ ಹರಿಸಿ ಅವರ ಶ್ರೆಯೋಬಿವೃದ್ದಿಗೆ ಶ್ರಮಿಸುವಂತೆ ಕರೆ ನೀಡಿದರು.
ಅಗ್ನಿಬನ್ನಿರಾಯ, ತಿಗಳರ ಇತಿಹಾಸ, ಪರಂಪರೆಯನ್ನು ಮುಂದಿನ ಪೀಳಿಗೆಗೆ ತಿಳಿಸುವ ಉದ್ದೇಶದಿಂದ ಹೆಚ್ಚಿನ ಅಧ್ಯಯನ ಕೈಗೊಳ್ಳಲು ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಸಂಶೋಧನಾ ಕೇಂದ್ರ ತೆರೆಯಲು ಸರ್ಕಾರವು ಮುಂದಾಗಿದ್ದು ಪರಿಶಿಷ್ಟಜಾತಿ, ಪರಿಶಿಷ್ಟಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಶಿಕ್ಷಣ, ಉದ್ಯೋಗ, ಸಬಲೀಕರಣಕ್ಕಾಗಿ ವಿಶೇಷ ಅನುದಾನವನ್ನು ನೀಡಿ ಅವರ ಅಭ್ಯುದಯಕ್ಕೆ ಸರ್ಕಾರ ಶ್ರಮಿಸುತ್ತಿದ್ದು, ಕೃಷಿಯಾಧರಿತ ಕಸುಬುದಾರರಿಗೆ ವಿಶೇಷ ಘಟಕ ಯೋಜನೆಯನ್ನು ಜಾರಿಗೆ ತರುವ ಮೂಲಕ ಸಮುದಾಯದ ಏಳ್ಗೆಗೆ ಶ್ರಮಿಸಬೇಕಾಗಿದೆ ಎಂದು ಉಪನ್ಯಾಸಕ ಮಧುಸೂಧನ್ ಸರ್ಕಾರವನ್ನು ಒತ್ತಾಯಿಸಿದರು.
ಈ ಕಾರ್ಯಕ್ರಮದಲ್ಲಿ ಪ.ಪಂ ಸದಸ್ಯ ಜಿ ಸಿ ಕೃಷ್ಣಮೂರ್ತಿ, ಕುಮಾರ್, ಲೋಕೇಶ್ ಬಾಬು, ಬಲರಾಮಣ್ಣ, ಶಿವಣ್ಣ, ಕಂದಾಯ ನಿರೀಕ್ಷಕ ರಮೇಶ್ ಕುಮಾರ್, ಶಿರಸ್ತೇದಾರ್ ಶ್ರೀರಂಗ ಸೇರಿದಂತೆ ಸಮುದಾಯದ ಮುಖಂಡರು ಹಾಗೂ ಅಧಿಕಾರಿ ಸಿಬ್ಬಂದಿ ಉಪಸ್ಥಿತಿ
ವರದಿ ಸಂಜಯ್ ಕೊಪ್ಪ ಗುಬ್ಬಿ