ಮುಸ್ಲಿಂ ಸಮುದಾಯದ ಯುವಕರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ.

 ಮಧುಗಿರಿ: ಮುಸ್ಲಿಂ ಸಮುದಾಯದ ಯುವಕರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡಿರುವುದು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷದ ಗೆಲುವಿಗೆ ಸಹಕಾರಿಯಾಗಲಿದೆ ಎಂದು ಶಾಸಕ ಎಂ. ವಿ. ವೀರಭದ್ರಯ್ಯ ತಿಳಿಸಿದರು.



 ಪಟ್ಟಣದ ಕಾರ್ಯಪ್ಪ ಬಡಾವಣೆಯಲ್ಲಿ ಮುಸ್ಲಿಂ ಸಮುದಾಯದ ಯುವಕರನ್ನು ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದ ಅವರು, ರಾಜ್ಯದಲ್ಲಿರುವ ಬಿಜೆಪಿ ಸರ್ಕಾರವು ಈ ಸಮುದಾಯವನ್ನು ಅನುಮಾನದ ದೃಷ್ಟಿಯಿಂದ ನೋಡುತ್ತಿದೆ. ಜೆಡಿಎಸ್ ಪಕ್ಷ ಜಾತ್ಯತೀತ ನಿಲುವಿಗೆ ಬದ್ಧವಾಗಿದ್ದು, ಸಮಾಜದ ಎಲ್ಲ ವರ್ಗದವರನ್ನು ಸಮಾನತೆಯಿಂದ ಕಾಣುತ್ತಿದೆ ಎಂದ ಅವರು ಪಟ್ಟಣದಲ್ಲಿ ಅಲ್ಪಸಂಖ್ಯಾತ ಸಮುದಾಯದವರು ವಾಸಿಸುತ್ತಿರುವ ಪ್ರದೇಶಗಳಲ್ಲಿ 32 ಕೋಟಿ ರೂ ವೆಚ್ಚದಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗಿದೆ. ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳನ್ನು ದೂರವಿಟ್ಟು, ಜೆಡಿಎಸ್ ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡಿದರು. 


ಪುರಸಭಾ ಸದಸ್ಯ ಎಂ. ಎಲ್. ಗಂಗರಾಜು ಮಾತನಾಡಿ, ಪಟ್ಟಣದಲ್ಲಿ ನೂರಾರು ವರ್ಷಗಳಿಂದ ಹಿಂದೂ ಮುಸ್ಲಿಂ ಸಮುದಾಯದವರು ಅನ್ಯೋನ್ಯತೆಯಿಂದ ಸಹಬಾಳ್ವೆ ನಡೆಸುತ್ತಿದ್ದಾರೆ. ಆದರೆ ಕೆಲ ಸ್ವಾರ್ಥಿಗಳು ತಮ್ಮ ಬೇಳೆ ಬೇಯಿಸಿಕೊಳ್ಳಲು ಜಾತಿಯ ವಿಷ ಬೀಜ ಬಿತ್ತುತ್ತಿದ್ದಾರೆ ಅವರ ಮಾತುಗಳಿಗೆ ಕಿವಿಗೊಡದೆ ತಾಲೂಕಿನಲ್ಲಿ ಶಾಂತಿಯುತ ವಾತಾವರಣ ನೆಲೆಸಲು ಕಾರಣಕರ್ತರಾಗಿದ್ದ ಎಂ. ವಿ. ವೀರಭದ್ರಯ್ಯ ನವರನ್ನು ಮುಂದಿನ ಚುನಾವಣೆಯಲ್ಲಿ ಗೆಲ್ಲಿಸುವಂತೆ ಮನವಿ ಮಾಡಿದರು. 


ಪುರಸಭಾ ಸದಸ್ಯರಾದ ಎಂ. ಆರ್. ಜಗನ್ನಾಥ್, ಕೆ. ನಾರಾಯಣ್, ಎಂ. ಎಸ್. ಚಂದ್ರಶೇಖರ ಬಾಬು, ರವಿಕಾಂತ್ ಮುಂತಾದವರು ಇದ್ದರು.


ವರದಿ ಮಧುಗಿರಿ ಬಾಲು ಪನಿಂದ್ರ

ಕಾಮೆಂಟ್‌‌ ಪೋಸ್ಟ್‌ ಮಾಡಿ

Please Select Embedded Mode To Show The Comment System.*

ನವೀನ ಹಳೆಯದು