ಶಿರಾ:-ಕಾಂಗ್ರೆಸ್ ಮತ್ತು ಜೆಡಿಎಸ್ ಅಧಿಕಾರಕ್ಕಾಗಿ ಜಾತಿ ರಾಜಕಾರಣ ಮಾಡುತ್ತಿದ್ದರೆ, ಬಿಜೆಪಿ ಅಭಿವೃದ್ಧಿ ಪರ ರಾಜಕಾರಣ ಮಾಡುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.
ನಗರದಲ್ಲಿ ಬಿಜೆಪಿ ಜನಸಂಕಲ್ಪ ಯಾತ್ರೆ ಯಲ್ಲಿ ಉದ್ದೇಶಿಸಿ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಒಕ್ಕಲಿಗ ಸಮುದಾಯ ತಮ್ಮ ಬೆಂಬಲಕ್ಕೆ ನಿಲ್ಲುವಂತೆ ಬೇಡಿಕೊಳ್ಳುತ್ತಿದ್ದರೆ, ಕುಮಾರಸ್ವಾಮಿ ಮತ್ತೊಮ್ಮೆ ಅಧಿಕಾರಕ್ಕೆ ಏರುವ ಆಸೆಯಿಂದ ಒಕ್ಕಲಿಗ ಸಮುದಾಯದ ಓಲೈಕೆಯಲ್ಲಿ ತೊಡಗಿದ್ದಾರೆ. ಕಾಂಗ್ರೆಸ್, ಜೆಡಿಎಸ್ ಈ ರೀತಿ ಜನಾಂಗವನ್ನು ಓಲೈಸುವ ರಾಜಕಾರಣ ಮಾಡುತ್ತಿದ್ದರೆ, ಬಿಜೆಪಿ ಅಭಿವೃದ್ಧಿಯನ್ನು ಮುಂದಿಟ್ಟು ಜನರ ಬಳಿ ಮತಯಾಚಿಸುತ್ತಿದೆ ಎಂದರು.
ನಾವು ಅಭಿವೃದ್ಧಿಯ ರಿಪೋರ್ಟ್ ಕಾರ್ಡ್ ಇಟ್ಟುಕೊಂಡು ಮತಗಳನ್ನು ಕೇಳುತ್ತೇವೆ. ಪ್ರಣಾಳಿಕೆಯಲ್ಲಿ ಹೇಳದೇ ಇರುವಂತಹ ಯೋಜನೆಗಳನ್ನು ನಾವು ಕೊಟ್ಟಿದ್ದೇವೆ. ಅಲ್ಲದೇ ಅದರ ಕೆಲಸಗಳನ್ನು ಯಾರಿಗೂ ಹೇಳದೆ ಮಾಡಿ ತೋರಿಸಿದ್ದೇವೆ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ನಾಯಕರು ಗ್ಯಾರೆಂಟಿ ಕಾರ್ಡ್ ವಿತರಣೆ ಮಾಡುತ್ತಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷಕ್ಕೆ ದೇಶದಲ್ಲಿ ವಾರೆಂಟ್ ಅವಧಿ ಮುಗಿದಿದೆ. ಇನ್ನು ವಾರೆಂಟಿ ಕಾರ್ಡ್ ನೀಡಿ ಏನು ಪ್ರಯೋಜನ? ಎಲ್ಲಾ ಕಡೆಯೂ ಕಾಂಗ್ರೆಸ್ ಪಕ್ಷ ತಿರಸ್ಕಾರಕ್ಕೆ ಒಳಗಾಗುತ್ತಿದೆ. ಇಷ್ಟಕ್ಕೂ ನೀವು ಕೊಡುತ್ತಿರುವುದು ಫಾಲ್ಸ್ ಕಾರ್ಡ್ ಎಂಬುವುದು ಜನರಿಗೆ ಗೊತ್ತಿದೆ. ನೀವು ಅಧಿಕಾರದಲ್ಲಿ ಇದ್ದ ಸಂದರ್ಭ ಇದನ್ನು ಅನುಷ್ಠಾನಕ್ಕೆ ತಂದಿದ್ದರೆ ಅದೊಂದು ಮಾದರಿಯಾಗುತ್ತಿತ್ತು.
ನೀವು ಈ ಗ್ಯಾರೆಂಟಿ ಕಾರ್ಡ್ ಕೊಟ್ಟಿದ್ದರೆ ಅದು ಸತ್ಯದ ಮಾತಾಗುತ್ತಿತ್ತು. ಈ ಫಾಲ್ಸ್ ಕಾರ್ಡ್‌ಗೆ ಮೂರು ಕಾಸಿನ ಕಿಮ್ಮತ್ತು ಕೂಡಾ ಇಲ್ಲ. ಹಾಗಾಗಿ ಫಾಲ್ಸ್ ಕಾರ್ಡ್ ವಿರುದ್ಧ ನಾವು ರಿಪೋರ್ಟ್ ಕಾರ್ಡ್ ಕೊಡುತ್ತೇವೆ. ಕೆಲಸ ಮಾಡಿರುವುದನ್ನು ಜನರ ಮುಂದೆ ಇಟ್ಟು ಮತ ಕೇಳುತ್ತೇವೆ ಎಂದರು
ಇನ್ನೂ ನಗರಕ್ಕೆ
ಆಗಮಿಸಿದ ಜನಸಂಕಲ್ಪ ಯಾತ್ರೆಗೆ ಬಿಜೆಪಿ ಕಾರ್ಯಕರ್ತರು ಅದ್ಧೂರಿ ಸ್ವಾಗತ ಕೋರಿದರು.
ರಸ್ತೆಯಲ್ಲಿ ಹೂವುಗಳನ್ನು ಹಾಕುವ ಮೂಲಕ
ರಾಜ್ಯ ನಾಯಕರನ್ನು ಅಭಿನಂದಿಸಿದರು.
ಜಾನಪದ ಕಲಾ ತಂಡದ ಜೊತೆಗೆ ಅದ್ಧೂರಿ ಮೆರವಣಿಗೆಯೊಂದಿಗೆ ಪಟ್ಟಣಕ್ಕೆ ಆಗಮಿಸಿದಾಗ ಭವ್ಯ ಸ್ವಾಗತ ಕೋರಲಾಯಿತು. ಯಾತ್ರೆಯಲ್ಲಿ ಬಿಜೆಪಿ ಸಂಸದ ನಾರಾಯಣ್ ಸ್ವಾಮಿ.
ಮಧುಗಿರಿ ಸಂಘಟನೆ ಅದ್ಯಕ್ಷ ಬಿ.ಕೆ.ಮಂಜುನಾಥ್ ಶಾಸಕ ರಾಜೇಶ್ ಗೌಡ ಸೇರಿದಂತೆ ಹಲವರು ಹಾಜರಿದ್ದರು.
ಇದೆ ವೇಳೆ ದ್ವಿತೀಯ ಪಿ ಯು ಸಿ ಪರೀಕ್ಷೆ ಕೇಂದ್ರ ಮುಂದೆ ಜನಸಂಕಲ್ಪ ಯಾತ್ರೆ ಬಹು ಮುಖ್ಯವಾಗಿ. ಪರೀಕ್ಷೆ ಕೇಂದ್ರದ ಮುಂದೆ DJ ಹಾಕಿ ಕುಣಿಯುತ್ತಿರುವುದಕ್ಕೆ. ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದೆ..
ವರದಿ ಶಿರಾ ಶ್ರೀಮಂತ್.