ಸ್ಮಶಾನ ಜಾಗ ಕೋರಿ ಅರ್ಜಿ ಸಲ್ಲಿಕೆಗೆ ತಹಶೀಲ್ದಾರ್ ಅರ್ಚನಾ ಭಟ್ ಸೂಚನೆ.

 ಚಿಕ್ಕನಾಯಕನಹಳ್ಳಿ : ಸ್ಮಶಾನ ಜಾಗ ಕೋರಿ ಅರ್ಜಿ ಸಲ್ಲಿಕೆಗೆ ಸೂಚನೆ.


ತಾಲ್ಲೂಕಿನ ಯಾವುದೇ, ನಗರ, ಹಾಗೂ ಗ್ರಾಮೀಣ ಪ್ರದೇಶದಲ್ಲಿ ಸಾರ್ವಜನಿಕ ಸ್ಮಶಾನ ಇಲ್ಲದಿದ್ದಲ್ಲಿ ಜಿಲ್ಲಾಧಿಕಾರಿ ಕಚೇರಿ ಅಥವಾ ತಾಲೂಕು ಕಚೇರಿಗೆ ಅರ್ಜಿ ಸಲ್ಲಿಸುವಂತೆ ತಹಶೀಲ್ದಾರ್ ಅರ್ಚನಾ ಭಟ್ ತಿಳಿಸಿದ್ದಾರೆ.


ಅಲ್ಲದೆ, ಸರ್ಕಾರಿ ಜಮೀನು, ಕೆರೆ, ಕಟ್ಟೆ, ಕುಂಟೆ, ಹಳ್ಳ, ಸರೋವರ, ಇನ್ನಿತರೆ ಜಲಕಾಯ/ಜಲಮೂಲಗಳೆಂದು ವರ್ಗೀಕೃತ ಜಮೀನುಗಳೆಂದು ಗ್ರಾಮ ನಕಾಶೆಯಲ್ಲಿ ರಸ್ತೆ, ಬೀದಿ, ಬಂಡಿದಾರಿ, ಓಣಿ ಅಥವಾ ಹಾದಿ ಎಂದು ನಮೂದಾಗಿರುವ ಇತರೆ ಎಲ್ಲ ಸರ್ಕಾರಿ ಜಮೀನುಗಳು ಒತ್ತುವರಿಯಾಗಿದ್ದಲ್ಲಿ ಸಾರ್ವಜನಿಕರು ಜಿಲ್ಲಾಧಿಕಾರಿ ಕಚೇರಿ, ತಾಲೂಕು ಕಚೇರಿಗೆ ದೂರು ಸಲ್ಲಿಸುವಂತೆ ತಿಳಿಸಿದ್ದಾರೆ.


ವರದಿ ಚಿಕ್ಕನಾಯಕನಹಳ್ಳಿ ಚಂದ್ರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

Please Select Embedded Mode To Show The Comment System.*

ನವೀನ ಹಳೆಯದು