ಸೇವಾ ಕ್ಷೇತ್ರದಲ್ಲಿನ ಸಮಸ್ಯೆಗಳಿದ್ದಲ್ಲಿ ಮುಕ್ತ ಮನಸ್ಸಿನಿಂದ ಹಂಚಿಕೊಳ್ಳಿ ಪರಿಹಾರ ಕಂಡುಕೊಳ್ಳೋಣ :--- ಶಾಸಕ. ಸಿ. ಬಿ. ಸುರೇಶ್ ಬಾಬು.

ಚಿಕ್ಕನಾಯಕನಹಳ್ಳಿ : ವಿಶ್ವಾಸದಿಂದ ಕೆಲಸ ಮಾಡಿಕೊಂಡು ಹೋಗೋಣ ಎಲ್ಲರೂ ಕ್ಷೇತ್ರದ ಅಭಿವೃದ್ಧಿಗೆ ಒಟ್ಟಾಗಿ ಶ್ರಮಿಸೋಣ, ಸಮಸ್ಯೆಗಳೇ ಇದ್ದಲ್ಲಿ ಮುಕ್ತ ಮನಸ್ಸಿನಿಂದ ಮೇಲಾಧಿಕಾರಿಗಳಿಗೆ ಹಾಗೂ ತಮ್ಮಗೆ ಹಂಚಿಕೊಳ್ಳಿ ಬಗೆಹರಿಸಿಕೊಳ್ಳೋಣ ಎಂದು ಶಾಸಕ ಸಿಬಿ ಸುರೇಶ್ ಬಾಬು ತಾಲೂಕು ಪಂಚಾಯಿತಿ ಇಲಾಖೆ ಅಧಿಕಾರಿಗಳಲ್ಲಿ ಮನವಿ ಮಾಡಿದರು.


 ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ವಿಸ್ತರಣಾಧಿಕಾರಿ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡು ಪಂಚಾಯಿತಿ ಮಟ್ಟದಲ್ಲಿ ಸಾರ್ವಜನಿಕರಿಗೆ ಅತ್ಯುತ್ತಮ ಸೇವೆ ಒದಗಿಸುವುದು ಹಾಗೂ ಪಂಚಾಯಿತಿಗಳಿಗೆ ಹೊಸದಾಗಿ ಆಗಬೇಕಿರುವ ಕೆಲಸಗಳ ಬಗ್ಗೆ ಹೆಚ್ಚು ಒತ್ತು ನೀಡಬೇಕು, ಕ್ಷೇತ್ರದ ಜನರ ಒಳಿತಿಗಾಗಿ ನಿಮ್ಮ ಮನಸ್ಥಿತಿ ಇಟ್ಟುಕೊಳ್ಳಿ ಎಂದು ಅಧಿಕಾರಿಗಳಿಗೆ ತಿಳಿಸಿದರು.


 ತಮ್ಮ ತಮ್ಮ ವ್ಯಾಪ್ತಿಗೆ ಒಳಪಡುವಂತಹ ಕ್ಷೇತ್ರಗಳಲ್ಲಿ ಯಾವ ಯಾವ ಸಮಸ್ಯೆಗಳಿವೆ ತಕ್ಷಣವೇ ಮೇಲಾಧಿಕಾರಿಗಳ ಹಾಗೂ ನಮ್ಮ ಗಮನಕ್ಕೆ ತಂದು ಕೂಡಲೇ ಪರಿಹಾರಕ್ಕೆ ಮಾರ್ಗದರ್ಶಿ ಪಡೆಯಬೇಕು.

 ಸರ್ಕಾರಿ ಸ್ವತ್ತುಗಳನ್ನು ಗುರುತಿಸಿ, ಅವಶ್ಯಕತೆ ಇರುವ ಕಡೆ ನಿರಾಶ್ರಿತರಿಗೆ ಆಶ್ರಯ ಯೋಜನೆಯಲ್ಲಿ ನಿವೇಶನಗಳು,ಸರ್ಕಾರಿ ಕಚೇರಿಗಳಿಗೆ ಮೀಸಲಿಡುವುದು, ಹಾಗೂ ಅರ್ಹ ಫಲಾನುಭವಿಗಳಿಗೆ ನಿವೇಶನ ಹಾಗೂ ವಸತಿ ಸೌಲಭ್ಯ ಕಲ್ಪಿಸಲು ತಮ್ಮ ಪಂಚಾಯತಿ ಜನಪ್ರತಿನಿಧಿಗಳ ಸಲಹೆ ಸೂಕ್ತ ದೊಂದಿಗೆ ಪರಿಹಾರಕ್ಕೆ ಮೊದಲ ಆದ್ಯತೆ ನೀಡಿ. ನಮ್ಮ ಮೊದಲ ಪ್ರಯತ್ನ ಸರ್ಕಾರದ ಮಟ್ಟದಲ್ಲಿ ನಿವೇಶನ ಹಾಗೂ ವಸತಿ ಸೌಲಭ್ಯಗಳನ್ನು ಶಕ್ತಿ ಮೀರಿ ಕಲ್ಪಿಸಿಕೊಡುವಲ್ಲಿ ಪ್ರಯತ್ನಪಡುತ್ತೇನೆ ಎಂದು ನುಡಿದರು.

 ಕುಡಿಯುವ ನೀರಿನ ಸೌಲಭ್ಯ, ವಿದ್ಯುತ್ ಸೌಕರ್ಯ, ಸ್ಥಳೀಯ ಸಮಸ್ಯೆಗಳು ಮತ್ತು ಜಲಜೀವನ್ ಮಿಷನ್ ಯೋಜನೆಯಡಿ ಯಾವ ಯಾವ ಕಡೆ ಯೋಜನೆಯ ಕಾಮಗಾರಿ ಅಪೂರ್ಣವಾಗಿವೆ, ಕಾಮಗಾರಿ ಟೆಂಡರ್ ಆಗದೆ ಇರುವ ಬಗ್ಗೆ ತಮ್ಮ ಗಮನಕ್ಕೆ ತನ್ನಿ ಎಂದರು.


ಈ ವೇಳೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ವಸಂತ್ ಕುಮಾರ್, ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಪಿಡಿಒ ಅಧಿಕಾರಿಗಳು ಹಾಜರಿದ್ದರು.


 ವರದಿ ಚಿಕ್ಕನಾಯಕನಹಳ್ಳಿ ಚಂದ್ರು 

ಕಾಮೆಂಟ್‌‌ ಪೋಸ್ಟ್‌ ಮಾಡಿ

Please Select Embedded Mode To Show The Comment System.*

ನವೀನ ಹಳೆಯದು