ತಂಬಾಕಿನ ದುಷ್ಪರಿಣಾಮದ ಜಾಗೃತಿ ಅಗತ್ಯ: ನ್ಯಾಯಾಧೀಶ ಟಿ.ಎಲ್ ಸಂದೇಶ್

ಶಿರಾ: ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿ ಣಾಮದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಟಿ ಎಲ್ ಸಂದೇಶ್  ಪ್ರಧಾನ ಸಿವಿಲ್ ನ್ಯಾಯಾಧೀಶರು ತಿಳಿಸಿದರು.


 ನಗರದ ಸಾರ್ವಜನಿಕ ಆಸ್ಪತ್ರೆಯ ಮತ್ತು ಕಾನೂನು ಸೇವಾ ಪ್ರಾಧಿಕಾರ ಹಾಗೂ ವಕೀಲರ ಸಂಘದಿಂದ ನಡೆದ ವಿಶ್ವ ತಂಬಾಕು ರಹಿತ ದಿನ ಕಾರ್ಯಕ್ರಮದ ಜಾಗೃತಿ ಜಾಥಾ ಕಾರ್ಯಕ್ರಮಉದ್ಘಾಟಿಸಿ ಅವರು ಮಾತನಾಡಿದ ಅವರು ತಂಬಾಕು ಸೇವನೆಯಿಂದ ದೇಶದಲ್ಲಿ ಪ್ರತಿವರ್ಷ ಲಕ್ಷಾಂತರ ಜನರು ಸಾವನ್ನಪ್ಪುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಮಹಿಳೆ ಯರೂ ಕೂಡ ತಂಬಾಕು ವ್ಯಸನೀಯರಾಗಿರುವುದು ಆತಂಕದ ವಿಚಾರವಾಗಿದ್ದು, ತಂಬಾಕು ಸೇವನೆಯಿಂದ ಮುಕ್ತರಾಗು ವಂತೆ ಜಾಗೃತಿ ಮೂಡಿಸುವ ಕೆಲಸವಾಗ ಬೇಕು ಎಂದು ತಿಳಿಸಿದರು.

ತಂಬಾಕಿನಲ್ಲಿ ಕ್ಯಾನ್ಸರ್ ಕಾರಕ ವಸ್ತು ಗಳು ಇರುವುದರಿಂದ ಇದು ಮನುಷ್ಯನ ದೇಹದಲ್ಲಿ ಸೇರಿ ಉಸಿರಾಟದ ಸಮಸ್ಯೆ ಸೇರಿದಂತೆ ಹಲವು ಆರೋಗ್ಯದ ಸಮಸ್ಯೆಗಳಿಗೆ ತುತ್ತಾಗುವಂತೆ ಮಾಡುತ್ತದೆ. ಇದರಿಂದ ವಿಶ್ವದಲ್ಲಿ ಸಾಕಷ್ಟು ಜನರು ಸಾವನ್ನ ಪ್ಪುತ್ತಿದ್ದಾರೆ. ಈ ಪೈಕಿ ಧೂಮಪಾನದಿಂದ ಮೃತ ಪಟ್ಟವರೇ ಹೆಚ್ಚು ಎಂದು ವಿವರಿಸಿದರು.

ಕಾರ್ಯಕ್ರಮದಲ್ಲಿ ಸಾರ್ವಜನಿಕ ಆಸ್ಪತ್ರೆಯ ಆರೋಗ್ಯ ಅಧಿಕಾರಿ  ಶ್ರೀಕಾಂತ .ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಮುಖ್ಯಸ್ಥರಾದ ಡಾ: ಡಿ ಎಮ್ ಗೌಡ , ವಕೀಲರುಗಳು ತಾಲೂಕು ಕಾನೂನು ಸೇವಾ ಸಮಿತಿ ಸದಸ್ಯರು ಸೇರಿದಂತೆ. ಕಾಲೇಜ್ ವಿದ್ಯಾರ್ಥಿ, ಸಾರ್ವಜನಿಕ ಆಸ್ಪತ್ರೆಯ ಸಿಬ್ಬಂದಿ ವರ್ಗದವರು ಕಚೇರಿಯ ಸಿಬ್ಬಂದಿ ವರ್ಗದವರು ಹಾಜರಿದ್ದರು.


ವರದಿ ಶಿರಾ ಶ್ರೀಮಂತ್.

ಕಾಮೆಂಟ್‌‌ ಪೋಸ್ಟ್‌ ಮಾಡಿ

Please Select Embedded Mode To Show The Comment System.*

ನವೀನ ಹಳೆಯದು