ಬೆಂಗಳೂರು : ಜೂನ್ 16ರಿಂದ ಗೃಹಲಕ್ಷ್ಮಿ ಯೋಜನೆಗೆ ಮಹಿಳೆಯರಿಂದ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಪಿಎಲ್ ಕಾರ್ಡ್, ಅಂತ್ಯೋದಯ ಕಾರ್ಡ್ ನವರಿಗೂ ಈ ಯೋಜನೆಯ ಲಾಭ ಸಿಗುತ್ತದೆ ಎಂದು ಭರವಸೆ ನೀಡಿದರು.
ಕೆಲವು ತಾಂತ್ರಿಕ ಕಾಋಣಗಳಿಂದ ಅರ್ಜಿ ಸಲ್ಲಿಸುವುದು ಸ್ವಲ್ಪ ವಿಳಂಬವಾಗಿದೆ. ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಗಳಲ್ಲಿ ಅರ್ಜಿ ಸಲ್ಲಿಸಬಹುದು. ಏನಾದರೂ ಗೊಂದಲಗಳಿದ್ದರೆ 1902 ಹೆಲ್ಪ್ ಲೈನ್ ಮೂಲಕ ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ತಿಳಿಸಿದರು.
ಶುಕ್ರವಾರ ಮಧ್ಯಾಹ್ನ 1.30ಕ್ಕೆ ಗೃಹಲಕ್ಷ್ಮೀ ಯೋಜನೆಯ ಅರ್ಜಿ ಸಲ್ಲಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಂಕೇತಿಕವಾಗಿ ಶಕ್ತಿಭವರನದಲ್ಲಿ ಸೇವಾಸಿಂಧು ಪೋರ್ಟ್ ನಲ್ಲಿ ಚಾಲನೆ ನೀಡಲಿದ್ದಾರೆ ಎಂದರು.
ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕುವ ಪತಿ ಟ್ಯಾಕ್ಸ್ ಪೇಯರ್ಸ್ ಆಗಿದ್ದೆ, ಅರ್ಜಿ ರಿಜೆಕ್ಟ್ ಆಗಲಿದೆ. ಇ-ಗವರ್ನೆನ್ಸ್ ಮೂಲಕ ಅರ್ಜಿ ಹಾಕುವ ವ್ಯವಸ್ಥೆ ಮಾಡಿದ್ದೇವೆ. ಅರ್ಜಿದಾರರ ಪತಿ ಟ್ಯಾಕ್ಸ್ ಪೇಯರ್ಸ್ ಆಗಿದ್ದರೆ ಅರ್ಜಿ ಸ್ವೀಕಾರ ಆಗುವುದಿಲ್ಲ. ಹೀಗಾಗಿ ಸುಳ್ಳು ಮಾಹಿತಿ ನೀಡಿ ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ ಎಂದು ಹೇಳಿದರು.
ಅರ್ಜಿ ಸಲ್ಲಿಸಲು ಅರ್ಜಿದಾರರ ಹಾಗೂ ಪತಿಯ ಆಧಾರ್ ಕಾರ್ಡ್ ಸಂಖ್ಯೆ, ಮೊಬೈಲ್ ಸಂಖ್ಯೆ ಹಾಗೂ ಅರ್ಜಿದಾರರ ಬ್ಯಾಂಕ್ ಖಾತೆ ವಿವರಗಳು ಅಗತ್ಯವಾಗಿರುತ್ತವೆ.
ಮಂಜೂರಾತಿಯ ನಂತರ ನೇರ ನಗದು ವರ್ಗಾವಣೆ ಮಾಡಲಾಗುವುದು ಎಂದರು.