ಶಕ್ತಿ ಯೋಜನೆ ಜಾರಿ ಮಾಡುವ ಮೂಲಕ ಕಾಂಗ್ರೆಸ್ ಪಕ್ಷ ಕೊಟ್ಟ ಮಾತು ಉಳಿಸಿಕೊಂಡಿದೆ : ಶಾಸಕ ಜಯಚಂದ್ರ.

ಶಿರಾ:-ರಾಜ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಶಿರಾ ವಿಭಾಗದ ವತಿಯಿಂದ ಮಹಿಳೆಯರ ಉಚಿತ ಬಸ್ ಪ್ರಯಾಣ ಯೋಜನೆಯಾಗಿರುವ 'ಶಕ್ತಿ' ಯೋಜನೆಗೆ ನಗರದ ಬಸ್ ನಿಲ್ದಾಣದ ಆವರಣದಲ್ಲಿ ಚಾಲನೆ ನೀಡಿದ ಶಾಸಕ ಜಯಚಂದ್ರ.


ಕರ್ನಾಟಕ ರಾಜ್ಯದ ಇತಿಹಾಸದಲ್ಲಿ ಮೈಲಿಗಲ್ಲು ಸ್ಥಾಪಿಸಿದ ನಮ್ಮ ಸರ್ಕಾರ ಮಹಿಳೆಯರಿಗೆ ರಾಜ್ಯದಾದ್ಯಂತ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ಶಕ್ತಿ ಯೋಜನೆಗೆ ಚಾಲನೆ ನೀಡಿರುವುದು ದೇಶಕ್ಕೆ ಮಾದರಿ.


ಅತ್ಯಂತ ಕಡಿಮೆ ಅವಧಿಯಲ್ಲಿ ಶಕ್ತಿ ಯೋಜನೆ ಜಾರಿಗೆ ತರಲಾಗಿದೆ. ಐತಿಹಾಸಿಕ ಯೋಜನೆ ಜಾರಿಯಿಂದ ಮಹಿಳಾ ಸಮುದಾಯಕ್ಕೆ ಆರ್ಥಿಕವಾಗಿ ಲಾಭವಾಗಲಿದೆ. ಪ್ರತಿದಿನ ಕೆಲಸಕ್ಕೆ ಹೋಗುವ ಮಹಿಳೆಯರು, ಸಣ್ಣಪುಟ್ಟ ಕೆಲಸಗಳಿಗೆ ದೈನಂದಿನ ಪ್ರಯಾಣ ಮಾಡುವವರಿಗೆ ಪ್ರಯೋಜನ ಆಗಲಿದೆ ಎಂದರು.

ಮೊದಲ ಗ್ಯಾರಂಟಿ ಯೋಜನೆಯನ್ನು ಜಾರಿಗೆ ತರಲಾಗಿದೆ. ಇನ್ನುಳಿದ ಗ್ಯಾರಂಟಿ ಯೋಜನೆಗಳು ಕೂಡ ಜಾರಿಗೆ ತರಲಾಗುತ್ತಿದೆ‌. ನಾವು ನೀಡಿದ ಭರವಸೆಗಳನ್ನು ಈಡೇರಿಸುವ ಮೂಲಕ ಪಕ್ಷ ನೀಡಿದ ಗ್ಯಾರಂಟಿಗಳನ್ನು ಜಾರಿಗೆ ತರಲಾಗುತ್ತದೆ.

ಮಹಿಳೆಯರು ಶಕ್ತಿ ಕಾರ್ಡುಗಳನ್ನು ಪಡೆದುಕೊಂಡು ರಾಜ್ಯದಲ್ಲೆಡೆ ಪ್ರಯಾಣ ಮಾಡಲಿದ್ದಾರೆ. ಸರಕಾರಕ್ಕೆ ಆರ್ಥಿಕ ಹೊರೆಯಾದರೂ ನಷ್ಟದಲ್ಲಿರುವ ಸಾರಿಗೆ ಸಂಸ್ಥೆಯು ಕೂಡ ಲಾಭ ಗಳಿಸುವ ಮೂಲಕ ಆರ್ಥಿಕವಾಗಿ ಸದೃಢವಾಗಲಿದೆ ಎಂದು ಶಾಸಕ ಜಯಚಂದ್ರ ವಿಶ್ವಾಸ ವ್ಯಕ್ತಪಡಿಸಿದರು.

ಗ್ಯಾರಂಟಿ ಮಾತ್ರವಲ್ಲದೇ ಸರಕಾರ ನೀಡಿರುವ ಉಳಿದ ಭರವಸೆಗಳನ್ನು ಕೂಡ‌ ಹಂತ ಹಂತವಾಗಿ ಈಡೇರಿಸಲಿದೆ ಎಂದು ಭರವಸೆ ನೀಡಿದರು.


ವರದಿ ಶಿರಾ ಶ್ರೀಮಂತ್.

ಕಾಮೆಂಟ್‌‌ ಪೋಸ್ಟ್‌ ಮಾಡಿ

Please Select Embedded Mode To Show The Comment System.*

ನವೀನ ಹಳೆಯದು