ಶಿರಾ: ಸಾರ್ವಜನಿಕ ಆಸ್ಪತ್ರೆಗೆ ಶಾಸಕ ಟಿ.ಬಿ.ಜಯಚಂದ್ರ ಭೇಟಿ ರೋಗಿಗಳಿಗೆ ಸಕಾಲದಲ್ಲಿ ಚಿಕಿತ್ಸೆ ಹಾಗೂ ವೈದ್ಯಕೀಯ ಸವಲತ್ತ್ನು ನೀಡದ ಬಗ್ಗೆ ದೂರುಗಳು ಬರದಂತೆ ನೋಡಿಕೊಳ್ಳುಲು ಅಧಿಕಾರಿಗಳಿಗೆ ಶಾಸಕ ಸೂಚನೆ.
ರೋಗಿಗಳಿಗೆ ಸಕಾಲದಲ್ಲಿ ಚಿಕಿತ್ಸೆ ಹಾಗೂ ವೈದ್ಯಕೀಯ ಸವಲತ್ತ್ನು ನೀಡದ ಬಗ್ಗೆ ದೂರುಗಳು ಬರದಂತೆ ಎಚ್ಚರಿಕೆ ವಹಿಸಬೇಕು.
ನಗರದ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿ ರೋಗಿಗಳ ಸಮಸ್ಯೆ ಆಲಿಸಿದ ಶಾಸಕ ಟಿ.ಬಿ ಜಯಚಂದ್ರ.
ಆಸ್ಪತ್ರೆಯಲ್ಲಿ ಅಗತ್ಯವಿರುವ ಔಷಧಗಳನ್ನು ತರಿಸಿಕೊಂಡು ರೋಗಿಗಳಿಗೆ ನೀಡ ಬೇಕು. ಹೊರಗೆ ತರುವಂತೆ ಚೀಟಿ ಬರೆಯುವುದನ್ನು ನಿಲ್ಲಿಸಬೇಕು. ಆಸ್ಪತ್ರೆ ಯಲ್ಲಿ ಸ್ಚಚ್ಛತೆ ಕಾಪಾಡಿಕೊಳ್ಳಬೇಕು ಎಂದರು ಆಸ್ಪತ್ರೆಯಲ್ಲಿ ತಜ್ಞ ವೈದ್ಯರ ಕೊರತೆ ಇದ್ದು ಶೀಘ್ರವಾಗಿ ವೈದ್ಯರ ಕೊರತೆಯನ್ನು ನೀಗಿಸಲು ಕ್ರಮವಹಿಸುವುದಾಗಿ ಶಾಸಕ ಟಿ.ಬಿ.ಜಯಚಂದ್ರ ಹೇಳಿದರು.
ಶಿರಾ ಆಸ್ಪತ್ರೆಯಲ್ಲಿ ಅಪಘಾತ ಮತ್ತು ತುರ್ತು ಚಿಕಿತ್ಸಾ ಘಟಕದ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿದ್ದು ಶೀಘ್ರವಾಗಿ ಕಾಮಗಾರಿಯನ್ನು ಮುಗಿಸುವಂತೆ ಸೂಚಿಸಿದ ಅವರು ಇತ್ತೀಚೆಗೆ ಯುವ ಜನತೆ ಹೃದಯದ ಖಾಯಿಲೆಗಳಿಗೆ ತುತ್ತಾಗುತ್ತಿರುವುದು ಆತಂಕ ಉಂಟು ಮಾಡುವ ವಿಷಯವಾಗಿದೆ ಎಂದ ಅವರು ಜಯದೇವ ಹೃದ್ರೋಗ ಸಂಸ್ಥೆಯ ಪ್ರಾದೇಶಿಕ ಚಿಕಿತ್ಸಾ ಕೇಂದ್ರ ಮತ್ತು 30 ಹಾಸಿಗೆಯ ಆಸ್ಪತ್ರೆ ನಗರದಲ್ಲಿ ತೆರೆಯಲು ಚಿಂತನೆ ನೆಡಸಿದ್ದು ಶೀಘ್ರವಾಗಿ ಅನುಷ್ಠಾನಕ್ಕೆ ತರುತ್ತೇನೆ ಎಂದರು.
ಮತ್ತು ನಗರದ ಮಿನಿ ವಿಧಾನಸೌದ ದಲ್ಲಿ ಅಧಿಕಾರಿಗಳ ಸಭೆ ನೆಡಸಿ ಕ್ಷೇತ್ರದ ವ್ಯಾಪ್ತಿಯಲ್ಲಿ ಹಲವಾರು ಮಾಹಿತಿ ವಿನಿಮಯ ಮಾಡಿಕೊಂಡರು..
ವರದಿ ಶಿರಾ ಶ್ರೀಮಂತ್.