ಮಹಾನ್ ಶರಣ ಹಡಪದ ಅಡಪಣ್ಣ ಅವರ 889ನೆ ಜಯಂತಿ ತಾಲೂಕು ಆಡಳಿತ ವತಿಯಿಂದ ಆಚರಣೆಯನ್ನು

 ಗುಬ್ಬಿ : ವಚನಗಳ ಮೂಲಕ ಸಮಾಜ ಸುಧಾರಣೆಗೆ ಶ್ರಮಿಸಿದ ಮಹಾನ್ ಶರಣ ಹಡಪದ ಅಡಪಣ್ಣ ಅವರ 889ನೆ ಜಯಂತಿ ಆಚರಣೆಯನ್ನು ತಾಲೂಕು ಆಡಳಿತ ವತಿಯಿಂದ ತಾಲೂಕು ಕಚೇರಿಯ ಕಂದಾಯ ಭವನದಲ್ಲಿ ತಹಶೀಲ್ದಾರ್ ಬಿ ಆರತಿ ಅವರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು.

ತಹಶೀಲ್ದಾರ್ ಬಿ. ಆರತಿ ಮಾತನಾಡಿ ಶರಣ ಹಡಪದ ಅಪ್ಪಣ್ಣನವರು ಹನ್ನೆರಡನೆಯ ಶತಮಾನದ ವಚನ ಚಳುವಳಿ ಮತ್ತು ಸಾಮಾಜಿಕ ಕ್ರಾಂತಿಯ ಹರಿಕಾರರಲ್ಲಿ ಒಬ್ಬರು. ಇವರು "ಹಡಪದ" ಸಮಾಜದವರಾಗಿದ್ದು, ಬಸವಣ್ಣ ನವರ ಬಲಗೈ ಬಂಟನೆಂದೇ ಹೆಸರು ಪಡೆದಿದ್ದ ಇವರು ಬಸವಣ್ಣನವರ ಬಾಲ್ಯದ ಒಡನಾಡಿಗಳಾಗಿ ವಿಶ್ವದ ಪ್ರಪ್ರಥಮ ಪ್ರಜಾಪ್ರಭುತ್ವದ ಸಂಸತ್ತು ಎಂದೇ ಹೆಸರಾದ "ಅನುಭವ ಮಂಟಪದಲ್ಲಿ" ಬಸವಣ್ಣನವರಿಗೆ ಪ್ರಧಾನ ಕಾರ್ಯದರ್ಶಿಗಳಾಗಿ, ಬಸವಣ್ಣನವರಿಗೆ ಯಾವುದೇ ರೀತಿಯ ಮುಜುಗುರವಾಗದಂತೆ ಕಾರ್ಯನಿರ್ವಹಿಸಿದ ಹೆಗ್ಗಳಿಕೆ ಇವರ ಕಾರ್ಯಕ್ಷಮತೆಗೆ ಇಂದಿನವರಿಗೆ ಕನ್ನಡಿಯಾಗಿದೆಯೆಂದರೆ ತಪ್ಪಾಗಲಾರದು. ಅಂದು ಹಡಪದ ಸಮಾಜದವರು ಬೆಳಿಗ್ಗೆ ಎದರುಗಡೆ ಬಂದರೆ ಏನೋ ಆಗುತ್ತದೆ ಎಂಬ ಮೂಢ ನಂಬಿಕೆಯನ್ನು ಹೋಗಲಾಡಿಸುವುದಕ್ಕಾಗಿಯೆ ಬಸವಣ್ಣನವರು ಯಾರೇ ಬಂದರೂ ಮೊದಲು ಹಡಪದ ಅಪ್ಪಣ್ಣನವರನ್ನು ನೊಡಿಕೊಂಡು ಬರಬೇಕೆಂಬ ನಿಯಮವನ್ನೇ ಮಾಡಿದ್ದರೆಂಬ ಪ್ರತೀತಿ ಇದೆ". ಇವರ ಊರು ವಿಜಯಪುರ ಜಿಲ್ಲೆಯ ತಂಗಡಗಿಯಾಗಿರುತ್ತದೆ ಅಲ್ಲಿಯೆ ಇವರ ಸಮಾಧಿಯೂ ಸಹ ಇದೆ. ಇವರು ಸುಮಾರು ೨೫೦ಕ್ಕೂ ಹೆಚ್ಚು ವಚನಗಳನ್ನು ಅಪ್ಪಣ್ಣ ಪ್ರಿಯ ಚನ್ನಬಸವಣ್ಣ ಎಂಬ ಅಂಕಿತನಾಮದಿಂದ ವಚನಗಳನ್ನು ರಚಿಸಿದ್ದಾರೆ. ಬಸವಣ್ಣನವರಿಗೆ ಅಪ್ಪಣ್ಣನವರು ಪ್ರಾಣವೇ ಆಗಿದ್ದರೆಂಬುದಕ್ಕೆ ಕಲ್ಯಾಣಕ್ರಾಂತಿಯ ಕೊನೆಯ ದಿನಗಳನ್ನು ತಿಳಿದುಕೊಂಡರೆ ಗೊತ್ತಾಗುತ್ತದೆ. ಒಬ್ಬ ಕಾರ್ಯದರ್ಶಿ ಹೇಗೆ ಕಾರ್ಯನಿರ್ವಹಿಸಬೇಕೆಂಬುದಕ್ಕೆ ಹಡಪದ ಆಪ್ಪಣ್ಣನವರು ಒಂದು ಉತ್ತಮ ಉದಾಹರಣೆ ಎಂದು ತಿಳಿಸಿದರು.


ಈ ಜಯಂತಿ ಕಾರ್ಯಕ್ರಮದಲ್ಲಿ ಶಿರಸ್ತೇದಾರ್ ಶ್ರೀ ರಂಗ, ಖಾನ್, ಕಂದಾಯ ನಿರೀಕ್ಷಕ ರಮೇಶ್ ಕುಮಾರ್, ಶ್ರೀನಿವಾಸ್, ಸೇರಿದಂತೆ ತಾಲೂಕು ಕಚೇರಿಯ ಸಿಬ್ಬಂದಿ ಹಾಜರಿದ್ದರು.


ಸಂಜಯ್ ಕೊಪ್ಪ ಗುಬ್ಬಿ

ಕಾಮೆಂಟ್‌‌ ಪೋಸ್ಟ್‌ ಮಾಡಿ

Please Select Embedded Mode To Show The Comment System.*

ನವೀನ ಹಳೆಯದು